ADVERTISEMENT

ಪ್ರಪಂಚದಾದ್ಯಂತ ಆಹಾರ ಕೊರತೆ: ವಿಶ್ವಸಂಸ್ಥೆ ಎಚ್ಚರಿಕೆ

ಏಜೆನ್ಸೀಸ್
Published 24 ಜೂನ್ 2022, 13:05 IST
Last Updated 24 ಜೂನ್ 2022, 13:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬರ್ಲಿನ್: ಪ್ರಪಂಚದಾದ್ಯಂತ ಆಹಾರದ ಕೊರತೆ ಕಂಡುಬರುತ್ತಿದ್ದು, ಇದರಿಂದ ಜಗತ್ತು ಸಂಕಷ್ಟ ಎದುರಿಸಲಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ಶುಕ್ರವಾರ ಎಚ್ಚರಿಸಿದ್ದಾರೆ.

‘ಹವಾಮಾನ ಬದಲಾವಣೆಯಿಂದ ಜಗತ್ತು ಎದುರಿಸುತ್ತಿರುವ ಸಮಸ್ಯೆ, ಈಗ ಉಕ್ರೇನ್‌ ಯುದ್ಧದಿಂದಾಗಿ ಮತ್ತಷ್ಟು ತೀವ್ರಗೊಂಡಿದೆ. ಕೋವಿಡ್‌ ಪಿಡುಗು ಸಹ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ’ ಎಂದು ಅವರು ಹೇಳಿದ್ದಾರೆ.

ರಸಗೊಬ್ಬರ ಮತ್ತು ಇಂಧನ ಬೆಲೆಗಳು ಹೆಚ್ಚಿತ್ತಿರುವ ಕಾರಣ ಪ್ರಪಂಚದಾದ್ಯಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವಿದ್ಯಮಾನದಿಂದಾಗಿ ಏಷ್ಯಾ, ಆಫ್ರಿಕಾ ಮತ್ತು ಅಮೆರಿಕದಲ್ಲಿ ಕೃಷಿ ಉತ್ಪಾದನೆ ಕುಂಠಿತಗೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.