ADVERTISEMENT

ತುರ್ತು ವೈದ್ಯಕೀಯ ಸಾಮಗ್ರಿ ಹೊತ್ತ ಆರು ವಿಮಾನಗಳು ಭಾರತಕ್ಕೆ: ಅಮೆರಿಕ

​ಪ್ರಜಾವಾಣಿ ವಾರ್ತೆ
Published 7 ಮೇ 2021, 16:19 IST
Last Updated 7 ಮೇ 2021, 16:19 IST
ಸಾಂದರ್ಭಿಕ ಚಿತ್ರ – ಕೃಪೆ: ಪಿಟಿಐ
ಸಾಂದರ್ಭಿಕ ಚಿತ್ರ – ಕೃಪೆ: ಪಿಟಿಐ   

ವಾಷಿಂಗ್ಟನ್: ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯಿಂದ ತತ್ತರಿಸಿರುವ ಭಾರತಕ್ಕೆ ತುರ್ತು ವೈದ್ಯಕೀಯ ಸಾಮಗ್ರಿಗಳನ್ನೊಳಗೊಂಡ ಆರು ವಿಮಾನಗಳನ್ನು ಕಳೆದ ಒಂದು ವಾರದಲ್ಲಿ ಕಳುಹಿಸಿಕೊಡಲಾಗಿದೆ ಎಂದು ಅಮೆರಿಕ ತಿಳಿಸಿದೆ.

ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಮೆರಿಕವು ಭಾರತೀಯರ ಜತೆ ನಿಲ್ಲುತ್ತದೆ. ಪ್ರಸ್ತುತ ಬಿಕ್ಕಟ್ಟನ್ನು ಎದುರಿಸಲು ಭಾರತಕ್ಕೆ ಸುಮಾರು 10 ಕೋಟಿ ಡಾಲರ್ ನೆರವು ನೀಡಲಾಗುತ್ತಿದೆ. ಪ್ರಸ್ತುತ ಬಿಕ್ಕಟ್ಟಿಗೆ ಸ್ಪಂದಿಸಲು ಅಮೆರಿಕವು ಭಾರತದ ಅಧಿಕಾರಿಗಳು ಮತ್ತು ಆರೋಗ್ಯ ತಜ್ಞರ ಜತೆ ನಿಕಟ ಸಂಪರ್ಕದಲ್ಲಿದೆ ಎಂದು ಅಮೆರಿಕ ಸರ್ಕಾರದ ಪ್ರಕಟಣೆ ತಿಳಿಸಿದೆ.

ತೀವ್ರ ಸಂಕಷ್ಟಕ್ಕೀಡಾಗಿರುವ ಸೋಂಕಿತರ ಚಿಕಿತ್ಸೆಗಾಗಿ 1,25,000 ಸೀಶೆ ರೆಮ್‌ಡಿಸಿವಿರ್, ಆಮ್ಲಜನಕ ಕೊರತೆ ನೀಗಿಸುವ ಸಲುವಾಗಿ ಸುಮಾರು 1,500 ಆಮ್ಲಜನಕ ಸಿಲಿಂಡರ್‌ಗಳನ್ನು, 210 ಪಲ್ಸ್ ಆಕ್ಸಿಮೀಟರ್‌ಗಳನ್ನು ಕಳುಹಿಸಿಕೊಡಲಾಗಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗಾಗಿ ಸುಮಾರು 25 ಲಕ್ಷ ‘ಎನ್‌95’ ಮಾಸ್ಕ್‌ಗಳನ್ನೂ ಕಳುಹಿಸಿಕೊಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕೋವಿಡ್‌ ನಿಯಂತ್ರಣ ವಿಚಾರದಲ್ಲಿ ಭಾರತಕ್ಕೆ ನೆರವಾಗಬೇಕು ಎಂಬ ಅಭಿಪ್ರಾಯ ಅಮೆರಿಕದಲ್ಲಿ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.