ADVERTISEMENT

ಅಮೆರಿಕ: ಎಚ್ಚರಿಕೆ ನಡುವೆಯೂ ರಜಾದಿನಗಳಲ್ಲಿ ಹೆಚ್ಚಿದ ಪ್ರಯಾಣಿಕರ ಸಂಖ್ಯೆ

ಏಜೆನ್ಸೀಸ್
Published 21 ಡಿಸೆಂಬರ್ 2020, 5:59 IST
Last Updated 21 ಡಿಸೆಂಬರ್ 2020, 5:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸ್ಯಾನ್‌ ರಮೊನ್‌: ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆಯು ರಜಾದಿನಗಳಲ್ಲಿ ಪ್ರಯಾಣ ಮಾಡದಂತೆ ಮನವಿ ಮಾಡಿತ್ತು. ಆ‌ದರೂ ಕಳೆದೆರಡು ವಾರಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ವಿಮಾನದ ಮೂಲಕ ಪ್ರಯಾಣ ಮಾಡಿದ್ದಾರೆ.

ಈ ಮೂಲಕ ಸಾರ್ವಜನಿಕ ಆರೋಗ್ಯ ಇಲಾಖೆಯ ಮನವಿಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಅಮೆರಿಕದ ವಿಮಾನ ನಿಲ್ದಾಣಗಳಲ್ಲಿ ನವೆಂಬರ್‌ 29ರಿಂದ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಕ್ರೀನಿಂಗ್‌ ಮಾಡಲಾಗಿದೆ. ಥ್ಯಾಂಕ್ಸ್‌ ಗಿವಿಂಗ್ ಹಬ್ಬದ ವಾರಾಂತ್ಯದಲ್ಲಿ ಹಲವು ಮಂದಿ ಪ್ರಯಾಣಿಸಿದ್ದಾರೆ. ಈ ನಡುವೆ ಚಳಿಯು ಹೆಚ್ಚಿದ್ದರಿಂದ ಕೊರೊನಾ ಪ್ರರಕಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಈಗಾಗಲೇ ಅಮೆರಿಕದ ಆಸ್ಪತ್ರೆಗಳಲ್ಲಿ ಕೋವಿಡ್‌ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ಅಮೆರಿಕ ಸರ್ಕಾರವು ಮಾರ್ಚ್‌ ತಿಂಗಳಿನಿಂದ ನಾಗರಿಕರಿಗೆ ಮನೆಯಲ್ಲೇ ಉಳಿಯುವಂತೆ ಸೂಚನೆ ನೀಡಿದೆ.

ಸತತ ಏಳು ದಿನಗಳಿಂದ 1,76,000 ಹೊಸ ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ ಈಚೆಗೆ ಹೊಸ ಪ್ರಕರಣಗಳ ಸಂಖ್ಯೆ 2,15,000ಕ್ಕೆ ಏರಿಕೆಯಾಗಿವೆ. ಓಡಾಟದಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.