ವಿಯೆನ್ನಾ: ಜಿ7 ಶೃಂಗಸಭೆಯ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆ ಶಸ್ತಾಸ್ತ್ರ ಖರೀದಿ ಕುರಿತು ಮಾತುಕತೆ ನಡೆಸಲಾಗುವುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಅಮೆರಿಕ ಜೊತೆ ರಕ್ಷಣಾ ಒಪ್ಪಂದ ಮಾಡಿಕೊಳ್ಳಲು ಉತ್ಸುಹಕರಾಗಿದ್ದೇವೆ. ಆದರೆ ಅವರ ಜೊತೆ ಹೊಸ ನೆರವು ಕೇಳುತ್ತಿಲ್ಲ, ಅಮೆರಿಕದಿಂದ ಉಕ್ರೇನ್ ಶಸ್ತಾಸ್ತ್ರಗಳನ್ನು ಖರೀದಿಸಲಿದೆ ಎಂದು ಹೇಳಿದ್ದಾರೆ.
ಕೆನಡಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.