ಪಾಕ್
ವಾಷಿಂಗ್ಟನ್ (ಪಿಟಿಐ): ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಸಕಾಲದಲ್ಲಿ ಚುನಾವಣೆ ನಡೆಸಿ ಎಂದು ಪಾಕಿಸ್ತಾನಕ್ಕೆ ಅಮೆರಿಕ ಸಲಹೆ ನೀಡಿದೆ.
ಅಲ್ಲದೇ, ‘ಮಾನವ ಹಕ್ಕುಗಳು, ಮೂಲಭೂತ ಸ್ವಾತಂತ್ರ್ಯ ಹಾಗೂ ಕಾನೂನಿನ ನಿಯಮಾವಳಿಗಳನ್ನು ಗೌರವಿಸಬೇಕು’ ಎಂದೂ ಅದು ಪಾಕಿಸ್ತಾನವನ್ನು ಕೇಳಿಕೊಂಡಿದೆ.
ನವೆಂಬರ್ 6ರಂದು ಚುನಾವಣೆ ನಡೆಸುವಂತೆ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಈ ರೀತಿ ಪ್ರತಿಕ್ರಿಯಿಸಿದರು.
‘ಪಾಕಿಸ್ತಾನದ ಕಾನೂನುಗಳಿಗೆ ಅನುಗುಣವಾಗಿ ಚುನಾವಣಾ ಪ್ರಕ್ರಿಯೆ ನಡೆಸಿ’ ಎಂದು ಅವರು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.