ADVERTISEMENT

ಅಮೆರಿಕದ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ: ಇಬ್ಬರು ಸಾವು, 8 ಮಂದಿಗೆ ಗಂಭೀರ ಗಾಯ

ಏಜೆನ್ಸೀಸ್
Published 14 ಡಿಸೆಂಬರ್ 2025, 2:01 IST
Last Updated 14 ಡಿಸೆಂಬರ್ 2025, 2:01 IST
   

ವಾಷಿಂಗ್ಟನ್: ‘ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ’ ಎಂದು ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನ ಮೇಯರ್ ಬ್ರೆಟ್ ಸ್ಮೈಲಿ ತಿಳಿಸಿದ್ದಾರೆ.

ಘಟನೆಯಿಂದ ಬೆಚ್ಚಿ ಬಿದ್ದಿರುವ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವ ವಸತಿ ನಿಲಯಗಳು ಮತ್ತು ತರಗತಿಗಳಲ್ಲಿ ಅಡಗಿಕೊಂಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

‘ಬರಸ್ ಮತ್ತು ಹೋಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವ ವರದಿಗಳನ್ನು ನಾವು ದೃಢಪಡಿಸಿದ್ದೇವೆ. ಇತರೆ ಎಂಟು ಮಂದಿ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆ ಬಗ್ಗೆ ವಿಷಾದವಿದೆ’ ಎಂದು ಬ್ರೌನ್ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದೆ.

ADVERTISEMENT

‘ಗುಂಡಿನ ದಾಳಿಯ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಫ್‌ಬಿಐ ಸಿಬ್ಬಂದಿ ಈಗಾಗಲೇ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.