ADVERTISEMENT

ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆಸಿದ ಶಂಕಿತನ ವಿಡಿಯೊ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಡಿಸೆಂಬರ್ 2025, 4:53 IST
Last Updated 17 ಡಿಸೆಂಬರ್ 2025, 4:53 IST
   

ವಾಷಿಂಗ್ಟನ್: ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆಸಿದ ಶಂಕಿತನ ವಿಡಿಯೊವನ್ನು ಪೊಲೀಸರು ಬಿಡುಗಡೆ ಮಾಡಿದ್ದು, ಶಂಕಿತನಿಗಾಗಿ ಬಲೆ ಬೀಸಿದ್ದಾರೆ.

ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಬಂಬತ್ತು ಮಂದಿ ಗಾಯಗೊಂಡಿದ್ದರು ಎಂದು ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನ ಮೇಯರ್ ಬ್ರೆಟ್ ಸ್ಮೈಲಿ ತಿಳಿಸಿದ್ದರು.

ಶಂಕಿತನು ಬ್ರೌನ್ ವಿಶ್ವವಿದ್ಯಾಲಯದಲ್ಲಿ ಓಡಾಟ ನಡೆಸಿದ ವಿಡಿಯೊವನ್ನು ಪೊಲೀಸರು ‘ಎಕ್ಸ್‌‘ನಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಶಂಕಿತನ ಬಗ್ಗೆ ಮಾಹಿತಿ ನೀಡಿದವರಿಗೆ ₹45 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದೆ. ಆದಾಗ್ಯೂ ಅಧಿಕಾರಿಗಳು ಆರೋಪಿಗಳ ಪತ್ತೆಗಾಗಿ ಹಾಗೂ ಈ ಗುಂಡಿನ ದಾಳಿಯ ಹಿಂದೆ ಯಾರಿದ್ದಾರೆ ಎಂದು ತಿಳಿಯಲು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಶಂಕಿತನ ಬಗ್ಗೆ ತಿಳಿದವರು ಮಾಹಿತಿ ನೀಡಿ ಎಂದು ದೂರವಾಣಿ ಸಂಖ್ಯೆ ಉಲ್ಲೇಖಿಸಿ ಎಫ್‌ಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಶಂಕಿತನು ಬ್ರೌನ್ ವಿಶ್ವವಿದ್ಯಾಲಯದಲ್ಲಿ ಓಡಾಟ ನಡೆಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲೂ ಹರಿದಾಡುತ್ತಿದೆ. ಇದೀಗ ವಿಶ್ವವಿದ್ಯಾಲಯದಲ್ಲಿ ಭದ್ರತೆಯ ಬಗ್ಗೆಯೂ ಚರ್ಚೆಗಳು ಹುಟ್ಟು ಹಾಕಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.