ತೈಪೆ: ಚೀನಾದ ತೀವ್ರ ವಿರೋಧ ಮತ್ತು ಎಚ್ಚರಿಕೆಯ ನಂತರ ಅಮೆರಿಕ ಸರ್ಕಾರ ವಿಶ್ವಸಂಸ್ಥೆಯಲ್ಲಿನ ತನ್ನ ರಾಯಭಾರಿ ಕೆಲ್ಲಿ ಕ್ರಾಫ್ಟ್ ಅವರ ಯೋಜಿತ ತೈವಾನ್ ಪ್ರವಾಸವನ್ನು ರದ್ದುಗೊಳಿಸಿದೆ.
ಅಮೆರಿಕದಲ್ಲಿ ಶೀಘ್ರದಲ್ಲೇ ನಡೆಯಲಿರುವ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ನೆರವಾಗುವ ದೃಷ್ಟಿಯಿಂದ ಸರ್ಕಾರದ ಕಾರ್ಯದರ್ಶಿ ಮೈಕ್ ಪೊಂಪಿಯೊ ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳ ಸಾಗರೋತ್ತರ ಪ್ರವಾಸವನ್ನು ರದ್ದುಗೊಳಿಸುವ ನಿರ್ಧಾರ ಕೈಗೊಂಡಿರುವುದಾಗಿ ಅಮೆರಿಕ ಪ್ರಕಟಿಸಿದೆ.
ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ ಕೆಲ್ಲಿ ಕ್ರಾಫ್ಟ್ ಅವರು ಬುಧವಾರದಿಂದ ಮೂರು ದಿನಗಳ ಕಾಲ ತೈವಾನ್‌ಗೆ ಭೇಟಿ ನೀಡಿ, ಅಧ್ಯಕ್ಷ ತ್ಸೈ ಇಂಗ್–ವೆನ್ ಮತ್ತು ವಿದೇಶಾಂಗ ಸಚಿವ ಜೋಸೆಫ್ ವೂ ಅವರೊಂದಿಗೆ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.