ADVERTISEMENT

ಅಮೆರಿಕ: ನ್ಯೂಯಾರ್ಕ್‌ನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ, 19 ಸಾವು

ಏಜೆನ್ಸೀಸ್
Published 10 ಜನವರಿ 2022, 1:18 IST
Last Updated 10 ಜನವರಿ 2022, 1:18 IST
ಅಮೆರಿಕದ ನ್ಯೂಯಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ
ಅಮೆರಿಕದ ನ್ಯೂಯಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ   

ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 19 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ನ್ಯೂಯಾರ್ಕ್‌ನ ಬ್ರಾಂಕ್ಸ್‌ನಲ್ಲಿರುವ ವಸತಿ ಸಮುಚ್ಚಯದಲ್ಲಿ ಎಲೆಕ್ಟ್ರಿಕ್ ಸ್ಪೇಸ್ ಹೀಟರ್‌ನಲ್ಲಿ ದೋಷ ಕಾಣಿಸಿಕೊಂಡಿರುವುದೇ ಅಗ್ನಿ ಅವಘಡಕ್ಕೆ ಕಾರಣವಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ 19 ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯಿಂದಾಗಿ ಬಹುಮಹಡಿ ಕಟ್ಟಡದಲ್ಲಿ ದಟ್ಟವಾದ ಹೊಗೆ ಹರಡಿತ್ತು. ಇದರಿಂದ ಹಲವರಲ್ಲಿ ಉಸಿರಾಟದ ತೊಂದರೆ ಎದುರಾಗಿತ್ತು.

ಸುಮಾರು 200 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಡುಪ್ಲೆಕ್ಸ್ ಕಟ್ಟಡದಲ್ಲಿ ಬೆಂಕಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲು ಹರಸಾಹಸಪಡಬೇಕಾಯಿತು.

ಸಮೀಪ ಕಾಲಘಟ್ಟದಲ್ಲಿ ಅಮೆರಿಕದಲ್ಲಿ ನಡೆದ ಅತಿ ದೊಡ್ಡ ಅಗ್ನಿ ದುರಂತ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.