ವಾಷಿಂಗ್ಟನ್:ಚೀನಾ ಅಧಿಕಾರಿಗಳಿಗೆ ವೀಸಾ ನಿರ್ಬಂಧ ಹೇರುವ ಮಹತ್ವದ ಮಸೂದೆಯನ್ನು ಅಮೆರಿಕದ ಸಂಸತ್ತು ಅಂಗೀಕರಿಸಿದೆ.
ಅಮೆರಿಕದ ಪ್ರಜೆಗಳು, ಸರ್ಕಾರಿ ಅಧಿಕಾರಿಗಳು ಮತ್ತು ಪತ್ರಕರ್ತರಿಗೆ ಟಿಬೆಟ್ ಭೇಟಿಗೆ ತಡೆಯೊಡ್ಡುವ ಚೀನಾದ ಅಧಿಕಾರಿಗಳಿಗೆ ಇನ್ನು ಮುಂದೆ ಅಮೆರಿಕ ವೀಸಾ ನಿರಾಕರಿಸಲಿದೆ.
ಈ ಮಸೂದೆಯನ್ನು ಧ್ವನಿ ಮತದ ಮೂಲಕಸರ್ವಾನುಮತದಿಂದ ಅಂಗೀಕರಿಸಲಾಯಿತು.ಚೀನಾದ ಬೃಹತ್ ವ್ಯಾಪಾರ ಆಮದಿನ ಮೇಲೆ ಟ್ರಂಪ್ ಸರ್ಕಾರ ಪ್ರಭಾವ ಬೀರಿದೆ. ಇದರಿಂದ ಚೀನಿಯರ ಆರ್ಥಿಕತೆಯ ಮೇಲೆ ಪರಿಣಾಮ ಉಂಟಾಗಿದ್ದು ಈ ಸಂದರ್ಭದಲ್ಲಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.