ADVERTISEMENT

ಭಯೋತ್ಪಾದನೆ ಶಮನಕ್ಕೆ ಅಮೆರಿಕ- ಭಾರತ ಜಂಟಿ ‍ಪ್ರಯತ್ನ: ಅಮೆರಿಕ ಸಂಸದ

ಪಿಟಿಐ
Published 1 ಜುಲೈ 2020, 7:23 IST
Last Updated 1 ಜುಲೈ 2020, 7:23 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಾಷಿಂಗ್ಟನ್‌: ಭಯೋತ್ಪಾದನೆ ಶಮನಕ್ಕಾಗಿ ಅಮೆರಿಕ ಮತ್ತು ಭಾರತ ಜಂಟಿಯಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದುಅಮೆರಿಕದ ಸಂಸದರೊಬ್ಬರುಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತಮ್ಮ ದೇಶದ ಸ್ನೇಹಿತರಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರು ಧನ್ಯವಾದ ಹೇಳಿದ್ದಾರೆ.

ಅಮೆರಿಕದ ಜನಪ್ರತಿನಿಧಿಗಳ ಸಭೆಯಲ್ಲಿ ಮಂಗಳವಾರ ರಾತ್ರಿ ಮಾತನಾಡಿದ ಸಂಸದ ಜಾನ್‌ ಕಾರ್ಟರ್‌, ಭಾರತ ಮತ್ತು ಅಮೆರಿಕ ಉತ್ತಮ ರಾಜತಾಂತ್ರಿಕ ಸಂಬಂಧವನ್ನೂ ಹೊಂದಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಾರಿ ಹೇಳುತ್ತಿವೆ ಎಂದಿದ್ದಾರೆ.

ಭಾರತ ಮತ್ತು ಅಮೆರಿಕ ದೇಶಗಳು ಭಯೋತ್ಪಾದನೆ ವಿರುದ್ಧ ಜೊತೆಯಾಗಿ ಹೋರಾಡುತ್ತಿವೆ. ಎರಡೂ ದೇಶಗಳು ಪರಸ್ಪರ ಒಬ್ಬರಿಗೊಬ್ಬರು ಸಹಾಯ ಮಾಡುತ್ತಿವೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರುಫೆಬ್ರುವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದಾಗ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಭಾರತದ ಜನರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್‌ ಅವರು, ರಕ್ಷಣೆ, ಇಂಧನ, ವ್ಯಾಪಾರ ಕ್ಷೇತ್ರಗಳಲ್ಲಿ ನೆರವು ನೀಡುವುದರ ಜತೆಗೆ ಮಹಿಳಾ ಉದ್ಯಮಿಗಳ ಪ್ರಗತಿಗೆ ಉತ್ತೇಜನ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಕಾರ್ಟರ್‌ ಸ್ಮರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.