ADVERTISEMENT

ಕೃಷಿ ಕಾಯ್ದೆಗಳ ರದ್ದು ನಿರ್ಧಾರವನ್ನು ಸ್ವಾಗತಿಸಿದ ಅಮೆರಿಕ ಕಾಂಗ್ರೆಸ್ ಸದಸ್ಯ

ಪಿಟಿಐ
Published 20 ನವೆಂಬರ್ 2021, 3:31 IST
Last Updated 20 ನವೆಂಬರ್ 2021, 3:31 IST
   

ವಾಷಿಂಗ್ಷನ್: ಮೂರೂ ಕೃಷಿ ಕಾಯ್ದೆಗಳನ್ನು ರದ್ದು ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ಅಮೆರಿಕ ಕಾಂಗ್ರೆಸ್ ಸದಸ್ಯ ಆ್ಯಂಡಿ ಲೆವಿನ್ ಸ್ವಾಗತಿಸಿದ್ದಾರೆ.

‘ವರ್ಷದ ಬಳಿಕ ಕೃಷಿ ಕಾಯ್ದೆಗಳನ್ನು ಹಿಂಪಡೆದಿರುವುದು ಸಂತೋಷದ ವಿಚಾರವಾಗಿದೆ’ ಎಂದು ಅವರು ಹೇಳಿದ್ದಾರೆ.

‘ಒಗ್ಗಟ್ಟಾಗಿ ಹೋರಾಡಿದರೆ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಸೋಲಿಸಿ ಮುನ್ನಡೆಯಬಹುದು’ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದಿದ್ದಾರೆ.

ನಿನ್ನೆ ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ದೇಶವನ್ನು ಉದ್ಧೇಶಿಸಿ ಮಾತನಾಡಿದ್ದ ಮೋದಿ, ಕೃಷಿ ಕಾಯ್ದೆಗಳನ್ನು ರೈತರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಜಾರಿಗೆ ತರಲಾಗಿತ್ತು. ಆದರೆ, ಒಂದು ವರ್ಗದ ರೈತರಿಗೆ ಮನವರಿಕೆ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ, ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿದ್ದೇವೆ. ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಇದಕ್ಕಾಗಿ ಬೇಕಾದ ಸಾಂವಿಧಾನಿಕ ಬದಲಾವಣೆ ಮಾಡಲಾಗುವುದು ’ಎಂದು ಘೋಷಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.