ADVERTISEMENT

ಜೂನ್‌ ಒಳಗಾಗಿ ಯುದ್ಧ ನಿಲ್ಲಿಸಲು ಅಮೆರಿಕ ಗಡುವು: ಝೆಲೆನ್‌ಸ್ಕಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 13:58 IST
Last Updated 7 ಫೆಬ್ರುವರಿ 2026, 13:58 IST
ವೊಲೊಡಿಮಿರ್‌ ಝೆಲೆನ್‌ಸ್ಕಿ
ವೊಲೊಡಿಮಿರ್‌ ಝೆಲೆನ್‌ಸ್ಕಿ   

ಕೀವ್: ಉಕ್ರೇನ್‌ ಮತ್ತು ರಷ್ಯಾ ನಡುವೆ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ಯುದ್ಧವನ್ನು ಜೂನ್‌ ಒಳಗಾಗಿ ಕೊನೆಗೊಳಿಸಿ, ಒಪ್ಪಂದ ಮಾಡಿಕೊಳ್ಳಲು ಅಮೆರಿಕವು ಉಭಯ ದೇಶಗಳಿಗೆ ಗಡುವು ನೀಡಿದೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ‘ಈ ವರ್ಷದ ಬೇಸಿಗೆ ಆರಂಭದ ವೇಳೆ ಎರಡೂ ರಾಷ್ಟ್ರಗಳು ಯುದ್ಧ ನಿಲ್ಲಿಸುವ ಒಪ್ಪಂದಕ್ಕೆ ಬದ್ಧರಾಗಬೇಕೆಂದು ಅಮೆರಿಕ ಹೇಳಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನೂ ಅಮೆರಿಕ ಮಾಡುತ್ತಿದೆ’ ಎಂದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT