ಕಠ್ಮಂಡು: ಅಮೆರಿಕದಲ್ಲಿ ಅಕ್ರಮವಾಗಿ ನೆಲಸಿದ್ದ 37 ನೇಪಾಳಿ ಪ್ರಜೆಗಳನ್ನು ಅಮೆರಿಕ ಸರ್ಕಾರವು ಗಡೀಪಾರು ಮಾಡಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು.
‘ನೇಪಾಳಿ ಪ್ರಜೆಗಳನ್ನು ಹೊತ್ತ ವಿಮಾನವು ಭಾನುವಾರ ಸಂಜೆ ಬಂದಿಳಿಯಿತು. ಇವರು ಅಮೆರಿಕದ ವಲಸೆ ನಿಯಮವನ್ನು ಉಲ್ಲಂಘಿಸಿರುವುದು ಪತ್ತೆಯಾಗಿದೆ’ ಎಂದು ವಲಸೆ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.
ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಜನವರಿಯಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಅಕ್ರಮವಾಗಿ ಅಮೆರಿಕದಲ್ಲಿ ನೆಲಸಿದ್ದ 177 ನೇಪಾಳಿ ಪ್ರಜೆಗಳನ್ನು ಗಡೀಪಾರು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.