ವಾಷಿಂಗ್ಟನ್): ಕಮ್ಯುನಿಸ್ಟ್ ಪಕ್ಷದೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾದ ಚೀನಾದ ಮಹಿಳೆಯೊಬ್ಬರನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಅಮೆರಿಕದ ರಾಜತಾಂತ್ರಿಕರೊಬ್ಬರನ್ನು ವಜಾಗೊಳಿಸಲಾಗಿದೆ.
ಇಂಥ ಕಾರಣಕ್ಕೆ ರಾಜತಾಂತ್ರಿಕರೊಬ್ಬರು ವಜಾಗೊಳ್ಳುತ್ತಿರುವುದು ಇದೇ ಮೊದಲು. ಅಮೆರಿಕದ ಸರ್ಕಾರಿ ಅಧಿಕಾರಿಗಳು, ಅವರ ಸಂಬಂಧಿಕರು ಮತ್ತು ಭದ್ರತೆಗೆ ಸಂಬಂಧಿಸಿದ ವ್ಯಕ್ತಿಗಳು ಚೀನಾ ಪ್ರಜೆಗಳ ಜೊತೆ ದೈಹಿಕ ಮತ್ತು ಭಾವನಾತ್ಮಕ ಸಂಬಂಧವನ್ನು ಹೊಂದುವುದನ್ನು ನಿಷೇಧಿಸಿ ಜೋ ಬೈಡೆನ್ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕಾನೂನು ರೂಪಿಸಲಾಗಿತ್ತು.
‘ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರ ನಾಯಕತ್ವವು ರಾಷ್ಟ್ರೀಯ ಭದ್ರತೆಗೆ ಅಪಾಯ ತಂದೊಡ್ಡುವ ಯಾವುದೇ ಸಿಬ್ಬಂದಿಯ ಬಗ್ಗೆ ಸಹಿಷ್ಣುತೆಯನ್ನು ಹೊಂದಿರುವುದಿಲ್ಲ’ ಎಂದು ವಿದೇಶಾಂಗ ಇಲಾಖೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.