ವಾಷಿಂಗ್ಟನ್: ಲಡಾಖ್ ಬಳಿಕ ಗಾಲ್ವನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಸಂಘರ್ಷದಲ್ಲಿ ಭಾರತದ ಯೋಧರು ಹುತಾತ್ಮರಾದ ಬಗ್ಗೆ ಅಮೆರಿಕ ತೀವ್ರ ಶೋಕ ವ್ಯಕ್ತಪಡಿಸಿದೆ.
ಯೋಧರ ಕುಟುಂಬದವರು, ಪ್ರೀತಿ ಪಾತ್ರರು ಮತ್ತು ಸಮುದಾಯದವರ ಅನುಭವಿಸುವ ನೋವಿನ ಬಗ್ಗೆ ಅರಿವಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಚೀನಾದ ರಾಜತಾಂತ್ರಿಕ ಅಧಿಕಾರಿ ಯಾಂಗ್ ಜಿಯೆಚಿ ಅವರ ಜತೆಗಿನ ಮಾತುಕತೆ ಬಳಿಕ ಪಾಂಪಿಯೊ ಈ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.