ADVERTISEMENT

ಅಮೆರಿಕದಲ್ಲಿ ಬಂದೂಕುಧಾರಿಯಿಂದ ಚರ್ಚ್‌ನಲ್ಲಿ ಗುಂಡಿನ ದಾಳಿ

ಏಜೆನ್ಸೀಸ್
Published 14 ಡಿಸೆಂಬರ್ 2020, 7:07 IST
Last Updated 14 ಡಿಸೆಂಬರ್ 2020, 7:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನ್ಯೂಯಾರ್ಕ್‌: ಇಲ್ಲಿನ ಚರ್ಚ್‌ವೊಂದರಲ್ಲಿ ಗುಂಡಿನ ದಾಳಿ ನಡೆಸಿದ ಬಂದೂಕುಧಾರಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

‘ನ್ಯೂಯಾರ್ಕ್‌ನ ಸೇಂಟ್ ಜಾನ್ ದಿ ಡಿವೈನ್‌ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಭಾನುವಾರ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಚರ್ಚ್‌ನಲ್ಲಿ ಕ್ರಿಸ್‌ಮಸ್‌ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂತ್ಯದಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಆತನನ್ನು ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದಾರೆ. ಸದ್ಯ ಆತನ ಪರಿಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.

45 ನಿಮಿಷದ ಸಂಗೀತ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಜನರು ಚರ್ಚ್‌ನಿಂದ ಹೊರ ನಡೆಯುತ್ತಿದ್ದ ವೇಳೆ ಗುಂಡಿನ ಶಬ್ಧಗಳು ಕೇಳಿಬಂದಿವೆ. ಇದರಿಂದ ಭಯಭೀತಗೊಂಡ ಜನರು ಓಡಲು ಪ್ರಾರಂಭಿಸಿದರು. ಭದ್ರತೆಗಾಗಿ ನಿಯೋಜಿಸಲಾಗಿದ್ದ ಪೊಲೀಸರು ತಕ್ಷಣವೇ ಬಂದು, ರೈಫಲ್‌ ಹಿಡಿದಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.