ದೇಗುಲ
ನ್ಯೂಯಾರ್ಕ್: ಅಮೆರಿಕದ ಇಂಡಿಯಾನದಲ್ಲಿರುವ ಹಿಂದೂ ದೇವಾಲಯವೊಂದರ ಸೂಚನಾ ಫಲಕವನ್ನು ವಿರೂಪಗೊಳಿಸಿರುವ ಘಟನೆ ನಡೆದಿದ್ದು, ಶಿಕಾಗೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಇದನ್ನು ಖಂಡಿಸಿದೆ.
ಘಟನೆಯ ಕುರಿತು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಅದು ತಿಳಿಸಿದೆ.
ಗ್ರೀನ್‌ವುಡ್ ಸಿಟಿಯ ಬೊಚಾಸನ್ವಾಸಿ ಅಕ್ಷರ ಪುರುಷೋತ್ತಮ್ ಸಂಸ್ಥೆಯ (ಬಿಎಪಿಎಸ್) ಸ್ವಾಮಿನಾರಾಯಣ ದೇವಾಲಯದಲ್ಲಿ ನಡೆದ ಘಟನೆ ‘ದ್ವೇಷಪೂರಿತ’ವಾಗಿದೆ. ಒಂದೇ ವರ್ಷದಲ್ಲಿ ನಾಲ್ಕನೇ ಬಾರಿಗೆ ಬಿಎಪಿಎಸ್ ದೇವಾಲಯವನ್ನು ಗುರಿಯಾಗಿಸಲಾಗಿದೆ ಎಂದು ದೇವಾಲಯದ ಸಾರ್ವಜನಿಕ ಸಂಪರ್ಕ ವಿಭಾಗವು ತನ್ನ ‘ಎಕ್ಸ್’ ಖಾತೆಯಲ್ಲಿ ಮಂಗಳವಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.