ನ್ಯೂಯಾರ್ಕ್: ದ್ವಿಪಕ್ಷೀಯ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ವೇಳೆ ದ್ವಿಪಕ್ಷೀಯ ಪಾಲುದಾರಿಕೆ ಮತ್ತು ಪ್ರಾದೇಶಿಕ ಹಾಗೂ ಜಾಗತಿಕ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ.
ಭೇಟಿ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕ್ವಾಡ್ ವಿದೇಶಾಂಗ ಮಂತ್ರಿಗಳ ಸಭೆಯ ಹೊರತಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರನ್ನು ಭೇಟಿ ಮಾಡಿದ್ದು ಸಂತಸವಾಯಿತು ಎಂದು ತಿಳಿಸಿದ್ದಾರೆ.
ವ್ಯಾಪಾರ, ಭದ್ರತೆ, ನಿರ್ಣಾಯಕ ತಂತ್ರಜ್ಞಾನಗಳು, ಇಂಧನ ಮತ್ತು ಚಲನಶೀಲತೆ, ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳು ಸೇರಿದಂತೆ ಭಾರತ-ಅಮೆರಿಕ ದ್ವಿಪಕ್ಷೀಯ ಪಾಲುದಾರಿಕೆಯ ಕುರಿತು ಚರ್ಚಿಸಲಾಯಿತು ಎಂದು ಜೈಶಂಕರ್ ಹೇಳಿದ್ದಾರೆ.
ಇದೇ ವೇಳೆ ಜೈಶಂಕರ್ ಅವರು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೇತ್ ಅವರನ್ನು ಭೇಟಿಯಾಗಿ ಭಾರತ ಮತ್ತು ಅಮೆರಿಕ ನಡುವಿನ ರಕ್ಷಣಾ ಪಾಲುದಾರಿಕೆಯನ್ನು ಮುಂದುವರಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.