ADVERTISEMENT

ರಷ್ಯಾ-ಉಕ್ರೇನ್ ಯುದ್ಧ ಕೊನೆಗಾಣಿಸಲು ಬೆಂಬಲ: ಮೋದಿಗೆ ಟ್ರಂಪ್ ಧನ್ಯವಾದ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಸೆಪ್ಟೆಂಬರ್ 2025, 1:57 IST
Last Updated 17 ಸೆಪ್ಟೆಂಬರ್ 2025, 1:57 IST
<div class="paragraphs"><p>ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್</p></div>

ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್

   

(ಪಿಟಿಐ ಚಿತ್ರ)

ನ್ಯೂಯಾರ್ಕ್: 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಭಾಶಯಗಳನ್ನು ಕೋರಿದ್ದಾರೆ.

ADVERTISEMENT

ಈ ಸಂದರ್ಭದಲ್ಲಿ ರಷ್ಯಾ ಹಾಗೂ ಉಕ್ರೇನ್ ನಡುವಣ ಯುದ್ಧ ಕೊನೆಗೊಳಿಸಲು ಪ್ರಧಾನಿ ಮೋದಿ ಅವರ ಬೆಂಬಲಕ್ಕೆ ಟ್ರಂಪ್ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ 'ಟ್ರುಥ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

'ನನ್ನ ಮಿತ್ರ ಭಾರತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿರುವೆ. ನಾನು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದೇನೆ. ಅವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧವನ್ನು ಕೊನೆಗೊಳಿಸಲು ನಿಮ್ಮ ಬೆಂಬಲಕ್ಕೆ ಧನ್ಯವಾದಗಳು' ಎಂದು ಟ್ರಂಪ್ ತಿಳಿಸಿದ್ದಾರೆ.

ರಷ್ಯಾದಿಂದ ತೈಲ ಖರೀದಿಗೆ ದಂಡ ಸೇರಿದಂತೆ ಭಾರತೀಯ ಸರಕುಗಳ ಮೇಲೆ ಅಮೆರಿಕ ಶೇ 50ರಷ್ಟು ಆಮದು ಸುಂಕ ವಿಧಿಸಿದ್ದರಿಂದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೇಲೆ ಪರಿಣಾಮ ಬೀರಿತ್ತು.

ಅದಾದ ಬಳಿಕ ಟ್ರಂಪ್ ಸಕಾರಾತ್ಮಕ ಮಾತುಕಗಳನ್ನಾಡಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ನಡುವೆ ಭಾರತ ಹಾಗೂ ಅಮೆರಿಕ ನಡುವ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಸಂಬಂಧ ಮಾತುಕತೆ ಮಂಗಳವಾರ (ಸೆ. 16) ಪುನರಾರಂಭಗೊಂಡಿದೆ. ಈ ಮಾತುಕತೆಯು ಸಕಾರಾತ್ಮಕವಾಗಿ ಇತ್ತು ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.