ADVERTISEMENT

ಕೊರೊನಾ ಮೂಲ: ಒಂದು ಅಂತಿಮ ತೀರ್ಮಾನ ಕೈಗೊಳ್ಳಲು ಅಮೆರಿಕ ಗುಪ್ತಚರ ಸಂಸ್ಥೆಗಳು ವಿಫಲ

ಪಿಟಿಐ
Published 28 ಆಗಸ್ಟ್ 2021, 11:02 IST
Last Updated 28 ಆಗಸ್ಟ್ 2021, 11:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಾಷಿಂಗ್ಟನ್‌: ಕೊರೊನಾ ವೈರಸ್‌ನ ಮೂಲದ ಬಗ್ಗೆ ಖಚಿತವಾದ ತೀರ್ಮಾನ ಕೈಗೊಳ್ಳಲು ಅಮೆರಿಕದ ಗುಪ್ತಚರ ಸಂಸ್ಥೆಗಳು ವಿಫಲವಾಗಿವೆ ಎಂದು ಮೂಲಗಳು ತಿಳಿಸಿವೆ.

ಈ ವೈರಸ್‌ ಪ್ರಯೋಗಾಲಯದಿಂದಲೇ ಸೋರಿಕೆಯಾಗಿದೆಯೇ ಅಥವಾ ನೈಸರ್ಗಿಕವಾಗಿ ಪ್ರಸರಣಗೊಂಡಿದೆಯೇ ಎಂಬ ಬಗ್ಗೆ ನ್ಯಾಷನಲ್‌ ಇಂಟೆಲಿಜೆನ್ಸ್‌ನ ಅಧಿಕಾರಿಗಳಲ್ಲಿ ಭಿನ್ನಾಭಿಪ್ರಾಯಗಳಿವೆ ಎಂದು ಇವೇ ಮೂಲಗಳು ತಿಳಿಸಿವೆ.

ವೈರಸ್‌ನ ಮೂಲದ ಬಗ್ಗೆ ಪರಿಶೀಲನೆ ನಡೆಸುವಂತೆ ಅಧ್ಯಕ್ಷ ಜೋ ಬೈಡನ್‌ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಗುಪ್ತಚರ ಸಂಸ್ಥೆಗಳು ಕೈಗೊಂಡಿದ್ದ ತನಿಖಾ ವರದಿಯನ್ನು ಉಲ್ಲೇಖಿಸಿ ಮೂಲಗಳು ವರದಿ ಮಾಡಿವೆ.

ADVERTISEMENT

ಕೊರೊನಾ ವೈರಸ್ಅನ್ನು ಜೈವಿಕ ಅಸ್ತ್ರವನ್ನಾಗಿ ಅಭಿವೃದ್ಧಿಪಡಿಸಲಾಗಿದೆ ಎಂಬುದನ್ನು ಸಹ ಗುಪ್ತಚರ ಸಂಸ್ಥೆ ಅಧಿಕಾರಿಗಳು ಒಪ್ಪಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.