
ವೆಸ್ಟ್ ಪಾಮ್ ಬೀಚ್ (ಅಮೆರಿಕ): ಇರಾನ್ ಮೇಲಿನ ದಾಳಿಯ ಸಂದರ್ಭದಲ್ಲಿ ಅಮೆರಿಕಗೆ ಕೂಡ ನಷ್ಟ ಸಂಭವಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಶನಿವಾರ ಒಪ್ಪಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್, ಪೋಸ್ಟ್ ಮಾಡಿದ್ದಾರೆ.
ಇರಾನ್‌ನೊಂದಿಗಿನ ಘರ್ಷಣೆಯಲ್ಲಿ ಧೈರ್ಯವಂತ ಅಮೆರಿಕನ್ ಸೈನಿಕರ ಪ್ರಾಣತ್ಯಾಗವಾಗಬಹುದು.. ಸಾವುನೋವುಗಳು ಸಂಭವಿಸಬಹುದು.. ಆದರೆ, ಯುದ್ದದಲ್ಲಿ ಇದೆಲ್ಲವೂ ಸಾಮಾನ್ಯ ಎಂದು ಹೇಳಿದ್ದಾರೆ.
‘ಇರಾನ್, ದುರುದ್ದೇಶಪೂರಿತವಾಗಿ ಕೈಗೊಂಡಿರುವ ಪರಮಾಣು ಪರೀಕ್ಷೆಯನ್ನು ಕೈಬಿಡುವಂತೆ ನಾವು ಅವರಿಗೆ ಸೂಚಿಸಿದ್ದೆವು. ಈ ಕುರಿತು ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಕೂಡ ನಾವು ಪ್ರಯತ್ನಿಸಿದ್ದೆವು. ಆದರೆ, ಅವರು ಎಲ್ಲಾ ಅವಕಾಶಗಳನ್ನು ತಿರಸ್ಕರಿಸರಿಸಿದರು. ಇನ್ನೂ ಇದನ್ನು ನಾವು ಸಹಿಸಿಕೊಳ್ಳುವುದಿಲ್ಲ’ ಎಂದು ಹೇಳಿದ್ದಾರೆ.
ಇರಾನ್ ಪರಮಾಣು ಪರೀಕ್ಷೆ ನಡೆಸುತ್ತಿದೆ ಎಂದು ಆರೋಪಿಸಿ, ಕಳೆದ ಜೂನ್‌ನಲ್ಲಿ ಅಮೆರಿಕವು ಇರಾನ್ ಮೇಲೆ ದಾಳಿ ನಡೆಸಿತ್ತು.
ಅಮೆರಿಕದ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಇರಾನ್ ತನ್ನ ಪರಮಾಣು ಸಾಮರ್ಥ್ಯ ಮತ್ತು ಕ್ಷಿಪಣಿ ಬಲವನ್ನು ಹೆಚ್ಚಿಸಿಕೊಳ್ಳುತ್ತಿದೆ. ಹಾಗಾಗಿ ಈ ದಾಳಿಯು ನಮಗೆ ಅನಿವಾರ್ಯವಾಗಿದೆ. ನಮ್ಮ ದಾಳಿಯು ‘ಉದಾತ್ತ ಕಾರ್ಯಾಚರಣೆ’ಯಾಗಿದೆ ಎಂದು ಹೇಳಿದ್ದಾರೆ.
ಇರಾನ್‌ನ ನಾಗರಿಕರು ಸರ್ಕಾರವನ್ನು ಕಿತ್ತೊಗಿಯಬೇಕು ಎಂದು ಟ್ರಂಪ್ ಒತ್ತಾಯಿಸಿದ್ದಾರೆ.
ಪರಮಾಣು ಒಪ್ಪಂದಕ್ಕೆ ಇರಾನ್ ಸ್ಪಂದಿಸದ ಕಾರಣ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇಂದು(ಶನಿವಾರ) ಇರಾನ್ ಮೇಲೆ ದಾಳಿ ನಡೆಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.