
ಪ್ರಾತಿನಿಧಿಕ ಚಿತ್ರ
ವಾಷಿಂಗ್ಟನ್: ತನ್ನ ಮೇಲೆ ದಾಳಿಗೆ ಮುಂದಾದರೆ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿ ಪ್ರತಿದಾಳಿ ನಡೆಸುವುದಾಗಿ ಇರಾನ್ ಎಚ್ಚರಿಸಿದೆ.
'ಅಣ್ವಸ್ತ್ರ ಕಾರ್ಯಕ್ರಮಕ್ಕೆ ಸಂಬಂಧಿಸಿ ಇರಾನ್ ಕೂಡಲೇ ಸೂಕ್ತ ಒಪ್ಪಂದಕ್ಕೆ ಬರಬೇಕು. ತಪ್ಪಿದಲ್ಲಿ ಬಾಂಬ್ ದಾಳಿಯೂ ಸೇರಿ ಘೋರ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದರು.
ದಾಳಿ ಕುರಿತು ಬೆದರಿಕೆ ಹಾಕಿದರೆ ಅಮೆರಿಕದ ನೆಲೆ, ಸೌಲಭ್ಯ ಮತ್ತು ಮೂಲಸೌಕರ್ಯ ಗುರಿಪಡಿಸಲಾಗುವುದು ಎಂದು ಇರಾನ್ ಎಚ್ಚರಿಸಿದೆ.
ಈ ಕುರಿತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗೆ ಇರಾನ್ ರಾಯಭಾರಿ ಅಮೀರ್ ಸಯೀದ್ ಇರವಾನಿ ಪತ್ರ ಬರೆದಿದ್ದಾರೆ.
'ಅಮೆರಿಕ ಅಧ್ಯಕ್ಷರ ಹೇಳಿಕೆಯು ಮಿಲಿಟರಿ ದಾಳಿಯ ಅಪಾಯವನ್ನು ಸೂಚಿಸುತ್ತದೆ. ಇದರ ಪರಿಣಾಮ ವಿನಾಶಕಾರಿಯಾಗಲಿದೆ. ಅಂತರರಾಷ್ಟ್ರೀಯ ಶಾಂತಿ ಹಾಗೂ ಭದ್ರತೆಗೆ ಬೆದರಿಕೆಯನ್ನುಂಟು ಮಾಡಲಿದೆ' ಎಂದು ಹೇಳಿದ್ದಾರೆ.
ಇರಾನ್ ತನ್ನ ಅಣ್ವಸ್ತ್ರ ಕಾರ್ಯಕ್ರಮದ ಕುರಿತು ಅಸ್ಪಷ್ಟತೆಗಳನ್ನು ಪರಿಹರಿಸಲು ಬದ್ಧವಾಗಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಅಮೆರಿಕದಿಂದ ಸೇನಾ ಜಮಾವಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪ್ರದೇಶದಲ್ಲಿ ಅಮೆರಿಕ ಯುದ್ಧ ನೌಕೆ, ಯುದ್ಧ ವಿಮಾನ ಹಾಗೂ ಸೇನೆಯನ್ನು ನಿಯೋಜಿಸಿದೆ ಎಂದು ವರದಿಯಾಗಿದೆ.
ಮತ್ತೊಂದೆಡೆ ಇರಾನ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೂ ಮುನ್ನ ಒಪ್ಪಂದ ಮಾಡಿಕೊಳ್ಳಲು 15 ದಿನಗಳ ಗಡುವು ನೀಡುವುದಾಗಿ ಟ್ರಂಪ್ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.