ಗುಂಡಿನ ದಾಳಿ (ಸಾಂದರ್ಭಿಕ ಚಿತ್ರ)
ವಾಷಿಂಗ್ಟನ್: ಅಮೆರಿಕದ ವಿಸ್ಕಾನ್ಸಿನ್ ರಾಜ್ಯದ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಶಂಕಿತ ಶೂಟರ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಂಕಿತ ಶೂಟರ್‌ನನ್ನು ಶಾಲೆಯ ಬಾಲಾಪರಾಧಿ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ದಾಳಿ ಸಂಬಂಧ ಪರಿಶೀಲನೆ ನಡೆಸುವಾಗ ಶಂಕಿತ ಮೃತಪಟ್ಟಿರುವುದು ಖಚಿತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಶಿಶುವಿಹಾರದಿಂದ 12ನೇ ತರಗತಿಯವರೆಗೆ ಸುಮಾರು 400 ವಿದ್ಯಾರ್ಥಿಗಳಿಗೆ ಕಲಿಸುವ ಖಾಸಗಿ ಸಂಸ್ಥೆಯಾದ ಅಬಂಡಂಟ್ ಲೈಫ್ ಕ್ರಿಶ್ಚಿಯನ್ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಮ್ಯಾಡಿಸನ್ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ ಆರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ಲಿಖಿತ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.