
ಪಿಟಿಐ
ಸಾಂದರ್ಭಿಕ ಚಿತ್ರ
ವಾಷಿಂಗ್ಟನ್: ಪೂರ್ವ ಫೆಸಿಫಿಕ್ ಮಹಾಸಾಗರದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿರುವ ಶಂಕೆ ಮೇಲೆ ಹಡಗಿನ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ಅಮೆರಿಕ ಸೇನೆ ತಿಳಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸೇನೆಯು, ‘ದಾಳಿಗೊಳಗಾದ ಹಡಗು ಮಾದಕವಸ್ತು ಕಳ್ಳಸಾಗಣೆಯಲ್ಲಿ ತೊಡಗಿತ್ತು’ ಎಂದಿದೆ. ಇದರೊಂದಿಗೆ ಹಡಗಿಗೆ ಬೆಂಕಿ ಹೊತ್ತಿಕೊಂಡಿರುವ ವಿಡಿಯೊವನ್ನು ಹಂಚಿಕೊಂಡಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಕಳೆದ ಸೆಪ್ಟಂಬರ್‌ನಿಂದ ಕೆರಿಬಿಯನ್ ಸಮುದ್ರ ಹಾಗೂ ಪೂರ್ವ ಫೆಸಿಫಿಕ್ ಮಹಾಸಾಗರದಲ್ಲಿ ಈವೆರೆಗೆ ಒಟ್ಟು 43 ಹಡಗುಗಳ ಮೇಲೆ ದಾಳಿ ಮಾಡಲಾಗಿದ್ದು, 148 ಮಂದಿ ಸಾವಿಗೀಡಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.