ADVERTISEMENT

ಕಾಬೂಲ್‌ ದಾಳಿಯ ಹಿಂದೆ ಐಎಸ್‌ನ ಖುರಾಸನ್‌ಗಳು ಇರುವ ಬಗ್ಗೆ ಅಮೆರಿಕಕ್ಕೆ ಶಂಕೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2021, 16:59 IST
Last Updated 26 ಆಗಸ್ಟ್ 2021, 16:59 IST
ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡ ಮಹಿಳೆಯರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು (ಎಎಫ್‌ಪಿ)
ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡ ಮಹಿಳೆಯರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು (ಎಎಫ್‌ಪಿ)   

ವಾಷಿಂಗ್ಟನ್‌: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುರುವಾರ ನಡೆದ ಬಾಂಬ್‌ ದಾಳಿಯ ಹಿಂದೆ ಉಗ್ರ ಸಂಘಟನೆ ಐಎಸ್‌ನ–ಖುರಾಸನ್‌ ಇದೆ ಎಂದು ಅಮೆರಿಕದ ಅಧಿಕಾರಿಗಳು ಬಲವಾಗಿ ನಂಬಿದ್ದಾರೆ. ಈ ಕುರಿತು ಅಮೆರಿಕದ ಗುಪ್ತಚರ ಇಲಾಖೆಯ ನಿಕಟ ಮೂಲಗಳು ಮಾಹಿತಿ ಒದಗಿಸಿವೆ.

ದಾಳಿಯ ಬಗ್ಗೆ ಅಮೆರಿಕ ತನಿಖೆ ನಡೆಸುತ್ತಿದೆ. ಅದರೆ, ಸ್ಫೋಟದ ಹಿಂದೆ ಐಎಸ್‌ ಸಂಘಟನೆಯ ಕೈವಾಡ ಇರುವ ಎಲ್ಲ ಲಕ್ಷಣಗಳೂ ಇವೆ ಎಂದು ಅಮೆರಿಕ ಭಾವಿಸಿದೆ ಎಂದು ಗುಪ್ತಚರ ಇಲಾಖೆಯ ಮತ್ತೊಂದು ಮೂಲ ತಿಳಿಸಿದೆ.

ADVERTISEMENT

ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ಗುರುವಾರ ಸಂಭವಿಸಿದ ಅವಳಿ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 13 ಮಂದಿ ಸಾವಿಗೀಡಾಗಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕಾಬೂಲ್‌ನಲ್ಲಿ ನಡೆದ ಆತ್ಮಾಹುತಿ ದಾಳಿಯನ್ನು ಅಮೆರಿಕ ಖಚಿತಪಡಿಸಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಸೇರಿದಂತೆ ಪಾಶ್ಚಾತ್ಯ ರಾಷ್ಟ್ರಗಳು ಎಚ್ಚರಿಕೆ ನೀಡಿದ ಬೆನ್ನಲ್ಲೇ ಸ್ಫೋಟ ಸಂಭವಿಸಿದೆ.

ಇವುಗಳನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.