ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ರಾಯಿಟರ್ಸ್ ಚಿತ್ರ
ವಾಷಿಂಗ್ಟನ್: ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು 'ನ್ಯೂಯಾರ್ಕ್ ಪೋಸ್ಟ್' ಶನಿವಾರ ವರದಿ ಮಾಡಿದೆ.
ಶುಕ್ರವಾರ ನಡೆದ ಸಂದರ್ಶನವೊಂದರಲ್ಲಿ ಟ್ರಂಪ್ ಈ ವಿಚಾರ ತಿಳಿಸಿದ್ದಾರೆ. ಆದರೆ, ಉಭಯ ನಾಯಕರು ಎಷ್ಟು ಬಾರಿ ಮಾತನಾಡಿದ್ದೀರಿ ಎಂಬ ಪ್ರಶ್ನೆಗೆ, 'ಅದನ್ನು ಹೇಳದಿರುವುದೇ ಉತ್ತಮ' ಎಂದು ಪ್ರತಿಕ್ರಿಯಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
'ಅವರು (ವ್ಲಾಡಿಮಿರ್ ಪುಟಿನ್) ಜನರು ಸಾಯುವುದನ್ನು ತಪ್ಪಿಸಲು ಬಯಸಿದ್ದಾರೆ' ಎಂದು ಟ್ರಂಪ್ ಹೇಳಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ರಷ್ಯಾ ಅಧ್ಯಕ್ಷರ ಕಚೇರಿಯಾಗಲೀ, ಶ್ವೇತಭವನವಾಗಲಿ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಟ್ರಂಪ್ ಅವರು, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರನ್ನು ಬಹುಶಃ ಮುಂದಿನವಾರ ಭೇಟಿಯಾಗಿ ಯುದ್ಧವನ್ನು ಕೊನೆಗೊಳಿಸುವ ಸಂಬಂಧ ಚರ್ಚಿಸುವುದಾಗಿಯೂ ಶುಕ್ರವಾರ ಹೇಳಿದ್ದಾರೆ.
ರಷ್ಯಾ ಅಧ್ಯಕ್ಷರು, ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಲು ಸಿದ್ಧರಿದ್ದಾರೆ ಎಂದು ಪುಟಿನ್ ಅವರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಜನವರಿಯಲ್ಲಿ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.