ನವದೆಹಲಿ: ಅಮೆರಿಕದ ಸರಕುಗಳ ಮೇಲೆ ಯಾವುದೇ ಸುಂಕ ವಿಧಿಸುವುದಿಲ್ಲವೆಂದು ಭಾರತ ಹೇಳಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ದೋಹಾದಲ್ಲಿ ನಡೆದ ವ್ಯಾಪಾರ ಕುರಿತ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ‘ವ್ಯಾಪಾರ ಒಪ್ಪಂದದ ಭಾಗವಾಗಿ ಅವರು (ಭಾರತ) ನಮ್ಮ ಎಲ್ಲಾ ಸರಕುಗಳಿಗೂ ಸುಂಕ ವಿನಾಯಿತಿ ನೀಡುವುದಾಗಿ ಘೋಷಿಸಿದ್ದಾರೆ. ಭಾರತವು ಅಮೆರಿಕದ ಸರಕುಗಳ ಮೇಲೆ ಅತಿಹೆಚ್ಚು ಸುಂಕ ವಿಧಿಸುವ ರಾಷ್ಟ್ರವಾಗಿದೆ. ಸದ್ಯ ಈಗ ಸುಂಕ ಹಿಂಪಡೆಯುವುದಾಗಿ ಹೇಳಿದೆ’ ಎಂದು ಹೇಳಿದ್ದಾರೆ.
ಡೊನಾಲ್ಡ್ ಟ್ರಂಪ್ ಹೇಳಿಕೆ ಕುರಿತು ಭಾರತ ಸರ್ಕಾರ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.