ADVERTISEMENT

ಮೂರು ಭಾರತೀಯ ಕಂಪನಿಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಅಮೆರಿಕ

ಪಿಟಿಐ
Published 16 ಜನವರಿ 2025, 2:09 IST
Last Updated 16 ಜನವರಿ 2025, 2:09 IST
<div class="paragraphs"><p>ಜೋ ಬೈಡನ್‌</p></div>

ಜೋ ಬೈಡನ್‌

   

-ರಾಯಿಟರ್ಸ್‌ ಚಿತ್ರ

ವಾಷಿಂಗ್ಟನ್: ಭಾರತೀಯ ಕಂಪನಿಗಳಾದ ಇಂಡಿಯನ್ ರೇರ್ ಅರ್ಥ್ಸ್, ಇಂದಿರಾ ಗಾಂಧಿ ಪರಮಾಣು ಸಂಶೋಧನಾ ಕೇಂದ್ರ (ಐಜಿಸಿಎಆರ್) ಮತ್ತು ಭಾಭಾ ಅಣು ಸಂಶೋಧನಾ ಕೇಂದ್ರದ (ಬಾರ್ಕ್) ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದಾಗಿ ಅಮೆರಿಕ ಘೋಷಿಸಿದೆ.

ADVERTISEMENT

ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಅವರು ಅಧಿಕಾರ ವಹಿಸಿಕೊಳ್ಳುವುದಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ ನೇತೃತ್ವದ ಆಡಳಿತ ಈ ನಿರ್ಧಾರ ತೆಗೆದುಕೊಂಡಿದೆ.

ಶೀತಲ ಸಮರದ ಯುಗದಲ್ಲಿ ಭಾರತೀಯ ಘಟಕಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿತ್ತು. ಇದೀಗ ನಿರ್ಬಂಧಗಳನ್ನು ತೆರವುಗೊಳಿಸಿರುವುದರಿಂದ ‌ಜಂಟಿ ಸಂಶೋಧನೆ, ವಿಜ್ಞಾನ ಮತ್ತು ತಂತ್ರಜ್ಞಾನದ ಸಹಕಾರ ಸೇರಿದಂತೆ ಸುಧಾರಿತ ಇಂಧನ ಸಹಕಾರಕ್ಕಿದ್ದ ಅಡೆತಡೆಗಳನ್ನು ತೊಡೆದುಹಾಕಲಾಗಿದೆ ಎಂದು ಗುಣಮಟ್ಟ ಮಾಪನ ಸಂಸ್ಥೆ (ಬಿಐಎಸ್‌) ತಿಳಿಸಿದೆ.

ಅಮೆರಿಕ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಹಿತಾಸಕ್ತಿಗಳಿಗೆ ವಿರುದ್ಧವಾದ ಚಟುವಟಿಕೆಗಳಿಗಾಗಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ (ಪಿಆರ್‌ಸಿ) 11 ಕಂಪನಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದೆ.

ಅಮೆರಿಕ ಮತ್ತು ಭಾರತವು ಶಾಂತಿಯುತ ಪರಮಾಣು ಸಹಕಾರ, ಪರಮಾಣು ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಮುಂದುವರಿಸುವ ಬದ್ಧತೆಯನ್ನು ಹಂಚಿಕೊಳ್ಳುತ್ತದೆ. ಕಳೆದ ಹಲವಾರು ವರ್ಷಗಳಿಂದ ಬಲವರ್ಧಿತ ವಿಜ್ಞಾನ ಮತ್ತು ತಂತ್ರಜ್ಞಾನ ಸಹಕಾರದೊಂದಿಗೆ ಎರಡೂ ದೇಶಗಳು ಮತ್ತು ಪ್ರಪಂಚದಾದ್ಯಂತದ ತಮ್ಮ ಪಾಲುದಾರ ರಾಷ್ಟ್ರಗಳಿಗೆ ನೆರವು ನೀಡುತ್ತಿವೆ ಎಂದು ಬಿಐಎಸ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.