ADVERTISEMENT

‘ಬ್ರಿಟನ್‌ ಪ್ರಯಾಣಿಕರಿಗೆ ಕೋವಿಡ್‌ ನೆಗೆಟಿವ್‌ ವರದಿ ಕಡ್ಡಾಯ’

ಏಜೆನ್ಸೀಸ್
Published 25 ಡಿಸೆಂಬರ್ 2020, 8:00 IST
Last Updated 25 ಡಿಸೆಂಬರ್ 2020, 8:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಟ್ಲಾಂಟಾ : ಬ್ರಿಟನ್‌ನಿಂದ ಅಮೆರಿಕಕ್ಕೆ ವಿಮಾನ ಪ್ರಯಾಣ ಆರಂಭಿಸುವುದಕ್ಕೂ ಮುನ್ನ ಪ್ರಯಾಣಿಕರು ಕೊರೊನಾ ಪರೀಕ್ಷೆಯ ನೆಗೆಟಿವ್‌ ವರದಿಯನ್ನು ಪಡೆದಿರಬೇಕು ಎಂದು ಅಮೆರಿಕವು ಹೇಳಿದೆ.

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕವು ಹೊಸ ಪ್ರಯಾಣ ನಿರ್ಬಂಧವನ್ನು ಘೋಷಿಸಿದೆ.

‘ಬ್ರಿಟನ್‌ನಿಂದ ಆಗಮಿಸುವ ಪ್ರಯಾಣಿಕರು ತಮ್ಮ ಪ್ರಯಾಣದ ಮೂರು ದಿನಗಳ ಮುಂಚಿತವಾಗಿ ಕೋವಿಡ್ ನೆಗಟಿವ್‌ ವರದಿಯನ್ನು ಪಡೆದಿರಬೇಕು. ಈ ಫಲಿತಾಂಶವನ್ನು ವಿಮಾನ ನಿಲ್ದಾಣದಲ್ಲಿ ನೀಡಬೇಕು’ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಹೇಳಿದೆ.

ADVERTISEMENT

ಈ ಹೊಸ ಪ್ರಯಾಣ ನಿರ್ಬಂಧದ ಆದೇಶಕ್ಕೆ ಶುಕ್ರವಾರ ಸಹಿ ಹಾಕಲಾಗುವುದು. ಸೋಮವಾರದಿಂದ ಈ ಆದೇಶ ಜಾರಿಗೆ ಬರಲಿದೆ ಎಂದು ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.