ವಾಷಿಂಗ್ಟನ್: ಪಾಕಿಸ್ತಾನ ಮೂಲದ ಲಷ್ಕರ್ ಎ ತಯಬಾ, ಲಷ್ಕರ್ ಎ ಜಂಗ್ವಿ, ಐಎಸ್ಐಎಲ್ ಸಿನಾಯ್ ಪೆನಿನ್‌ಸುಲಾ ಸೇರಿದಂತೆ ಹಲವು ಗುಂಪುಗಳನ್ನು ಉಗ್ರ ಸಂಘಟನೆಗಳು ಎಂದು ಘೋಷಿಸಿರುವ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಮೆರಿಕ ಹೇಳಿದೆ.
ತನ್ನ ಅಧಿಕಾರಾವಧಿ ಅಂತ್ಯಗೊಳ್ಳುವ ದಿನಗಳು ಸಮೀಪಿಸುತ್ತಿರುವ ಕಾರಣ, ಈ ಸಂಘಟನೆಗಳಿಗೆ ಸಂಬಂಧಿಸಿದಂತೆ ತನ್ನ ನಿಲುವು ಕುರಿತು ಪರಿಶೀಲನೆ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಈ ನಿರ್ಧಾರ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.