ADVERTISEMENT

ಹಿಜಾಬ್ ಮೇಲಿನ ನಿಷೇಧವು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ: ಅಮೆರಿಕ

ಅನಿರ್ಬನ್ ಭೌಮಿಕ್
Published 12 ಫೆಬ್ರುವರಿ 2022, 1:24 IST
Last Updated 12 ಫೆಬ್ರುವರಿ 2022, 1:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕರ್ನಾಟಕದ ಶಾಲೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ.

'ಧಾರ್ಮಿಕ ಸ್ವಾತಂತ್ರ್ಯವು ಒಬ್ಬರ ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಒಳಗೊಂಡಿದೆ. ಭಾರತದ ಕರ್ನಾಟಕ ರಾಜ್ಯವು ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿರ್ಧರಿಸಬಾರದು. ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ. ಮಹಿಳೆಯರು ಹಾಗೂ ಹೆಣ್ಮಕ್ಕಳನ್ನು ಅಪ್ರಧಾನ ಹಾಗೂ ಅವಮಾನಗೊಳಿಸುತ್ತದೆ' ಎಂದು ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿ ಹುಸೇನ್ ಟ್ವೀಟಿಸಿದ್ದಾರೆ.

ಇದನ್ನೂ ಓದಿ:

ADVERTISEMENT

ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ ಕುರಿತು ಬಹಿರಂಗವಾಗಿ ಪ್ರತಿಕ್ರಿಯೆ ನೀಡಿರುವ ಅಮೆರಿಕದ ಜೋ ಬೈಡನ್ ಸರ್ಕಾರದ ಮೊದಲ ರಾಜತಾಂತ್ರಿಕ ಅಧಿಕಾರಿ ಅವರಾಗಿದ್ದಾರೆ.

ಆಸ್ಟ್ರೇಲಿಯಾದ ಮೆಲ್ಬರ್ನ್‌ನಲ್ಲಿ ನಡೆದ 'ಕ್ವಾಡ್' ಸದಸ್ಯ ರಾಷ್ಟ್ರಗಳ ಸಭೆಯ ಬೆನ್ನಲ್ಲೇ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹಾಗೂ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟೊನಿ ಬ್ಲಿಂಕೆನ್‌ ಭಾಗವಹಿಸಿದ್ದರು.

ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ. ಈ ಕುರಿತು ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನ, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯದಲ್ಲಿ ಸಮನ್ಸ್ ಜಾರಿಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.