ADVERTISEMENT

ಹತ್ತಿ, ಸಕ್ಕರೆ ಆಮದು: ಪಾಕ್ ನಿರ್ಧಾರಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದ ಅಮೆರಿಕ

ಪಿಟಿಐ
Published 7 ಏಪ್ರಿಲ್ 2021, 7:09 IST
Last Updated 7 ಏಪ್ರಿಲ್ 2021, 7:09 IST
ನೆಡ್ ಪ್ರೈಸ್‌
ನೆಡ್ ಪ್ರೈಸ್‌   

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಳಜಿಯುಕ್ತ ವಿಷಯಗಳಿಗೆ ಸಂಬಂಧಿಸಿದಂತೆ ನಡೆಯುವ ನೇರ ಮಾತುಕತೆಗಳನ್ನು ಉತ್ತೇಜಿಸುತ್ತೇವೆ. ಆದರೆ ಭಾರತದಿಂದ ಹತ್ತಿ ಮತ್ತು ಸಕ್ಕರೆಯ ಆಮದು ಮಾಡಿಕೊಳ್ಳದಿರಲು ಪಾಕಿಸ್ತಾನದ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿದೆ.

‘ನಾನು ನಿರ್ದಿಷ್ಟವಾಗಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ‘ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ನಾವು ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಳಜಿಯ ವಿಷಯಗಳ ಬಗ್ಗೆ ನೇರ ಮಾತುಕತೆಯನ್ನು ಬೆಂಬಲಿಸುತ್ತೇವೆ‘ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಪಾಕಿಸ್ತಾನದ ಉನ್ನತ ಮಟ್ಟದ ಸಮಿತಿಯ ಪ್ರಸ್ತಾವನೆಯನ್ನುಏಪ್ರಿಲ್ 1ರಂದು ಪಾಕಿಸ್ತಾನ ಸಚಿವ ಸಂಪುಟ ತಿರಸ್ಕರಿಸಿತ್ತು. ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯುವವರೆಗೂ, ಭಾರತದೊಂದಿಗಿನ ಸಂಬಂಧಗಳನ್ನು ಮುಂದುವರಿಸುವುದಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹ್ಮೂದ್‌ ಖುರೇಶಿ ಅವರು ಹೇಳುವ ಮೂಲಕ ಸಚಿವ ಸಂಪುಟದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.