ADVERTISEMENT

ಕೀವ್‌ಗೆ ಭಾನುವಾರ ಭೇಟಿ ನೀಡಲಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್

ಏಜೆನ್ಸೀಸ್
Published 24 ಏಪ್ರಿಲ್ 2022, 1:32 IST
Last Updated 24 ಏಪ್ರಿಲ್ 2022, 1:32 IST
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್   

ಕೀವ್: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಅವರು ಉಕ್ರೇನ್‌ನ ಕೀವ್‌ಗೆ ಭಾನುವಾರ ಭೇಟಿ ನೀಡುತ್ತಿದ್ದಾರೆ.

ರಷ್ಯಾ ಮತ್ತು ಉಕ್ರೇನ್ ನಡುವಣ ಸಂಘರ್ಷ ಆರಂಭವಾದ ಬಳಿಕ ಅಮೆರಿಕ ಸರ್ಕಾರದ ಅಧಿಕೃತ ನಿಯೋಗವೊಂದು ಇದೇ ಮೊದಲ ಬಾರಿಗೆ ಉಕ್ರೇನ್‌ಗೆ ಭೇಟಿ ನೀಡುತ್ತಿದೆ.

ಅಮೆರಿಕ ಸರ್ಕಾರದ ಪ್ರತಿನಿಧಿಗಳಾದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಮತ್ತು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಭಾನುವಾರ ಉಕ್ರೇನ್‌ಗೆ ಭೇಟಿ ನೀಡುತ್ತಿದ್ದಾರೆ. ಅವರ ನಿಯೋಗವನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ತಿಳಿಸಿದ್ದಾರೆ.

ADVERTISEMENT

ಫೆಬ್ರುವರಿ 24ರಂದು ರಷ್ಯಾದ ಪಡೆಗಳು ಉಕ್ರೇನ್ ಮೇಲೆ ವಿಶೇಷ ಮಿಲಿಟರಿ ಕಾರ್ಯಾಚರಣೆಯನ್ನು ಆರಂಭಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.