
ಸಿನ್ಸಿನಾಟಿ: ಅಮೆರಿಕದ ಓಹಿಯೋ ರಾಜ್ಯದಲ್ಲಿರುವ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಅವರ ಮನೆ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು, ಕಿಟಕಿಗಳನ್ನು ಹೊಡೆದು ಹಾಕಿದ್ದಾನೆ ಎಂದು ವರದಿಯಾಗಿದೆ.
ಸಿನ್ಸಿನಾಟಿ ನಗರದ ಪೂರ್ವದಲ್ಲಿರುವ ವ್ಯಾನ್ಸ್ ಅವರ ಮನೆಗೆ ನಿಯೋಜಿಸಲಾದ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಏಜೆನ್ಸಿ ವಕ್ತಾರ ಆಂಥೋನಿ ತಿಳಿಸಿದ್ದಾರೆ.
ಭಾನುವಾರ ಮಧ್ಯರಾತ್ರಿ ಮನೆಯಲ್ಲಿ ದೊಡ್ಡ ಶಬ್ದ ಕೇಳಿಸಿತ್ತು. ಆರೋಪಿ ಸುತ್ತಿಗೆಯಿಂದ ಕಿಟಕಿಯನ್ನು ಒಡೆದು ಮನೆಯೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ತಕ್ಷಣ ಆತನನ್ನು ಬಂಧಿಸಲಾಗಿದೆ ಎಂದೂ ಅವರು ವಿವರಿಸಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ ವ್ಯಾನ್ಸ್ ಕುಟುಂಬಸ್ಥರು ಮನೆಯಲ್ಲಿ ಇರಲಿಲ್ಲ. ಬಂಧಿತ ಆರೋಪಿ ನಮ್ಮ ವಾಹನವನ್ನು ಸಹ ಧ್ವಂಸಗೊಳಿಸಿದ್ದಾನೆ ಎಂದು ಆಂಥೋನಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.