ADVERTISEMENT

ಕೋವಿಡ್ ಹೆಚ್ಚಿರುವ ಚೀನಾಕ್ಕೆ ಹೋಗಬೇಡಿ: ಅಮೆರಿಕ ಎಚ್ಚರಿಕೆ

ಏಜೆನ್ಸೀಸ್
Published 9 ಏಪ್ರಿಲ್ 2022, 13:05 IST
Last Updated 9 ಏಪ್ರಿಲ್ 2022, 13:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀಜಿಂಗ್: ಚೀನಾದ ವಾಣಿಜ್ಯ ರಾಜಧಾನಿ ಶಾಂಘೈನಲ್ಲಿ ಸೋಂಕು ನಿಯಂತ್ರಣಕ್ಕೆ ಹಂತ ಹಂತವಾಗಿ ಹೇರಿದ ಲಾಕ್‌ಡೌನ್‌ನಿಂದಾಗಿ ಆಹಾರದ ಹಾಹಾಕಾರ ಎದುರಾದ ಬೆನ್ನಲ್ಲೇ, ತನ್ನ ನಾಗರಿಕರಿಗೆ ಚೀನಾ ಪ್ರವಾಸಕ್ಕೆ ಹೋಗದಂತೆ ಅಮೆರಿಕ ಸರ್ಕಾರ ಎಚ್ಚರಿಕೆ ನೀಡಿದೆ.

ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಚೀನಾ ಸರ್ಕಾರ ಮನಬಂದಂತೆ ಕೋವಿಡ್ ನಿರ್ಬಂಧಗಳನ್ನು ವಿಧಿಸುತ್ತಿದೆ. ಹೀಗಾಗಿ ಚೀನಾ ಪ್ರವಾಸಕ್ಕೆ ಹೋಗುವ ನಾಗರಿಕರು ಈ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು ಅಮೆರಿಕ ತನ್ನ ಪ್ರಜೆಗಳಿಗೆ ಸೂಚಿಸಿದೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕದ ರಾಯಭಾರ ಕಚೇರಿಯ ವಕ್ತಾರರು, ಶಾಂಘೈನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಅಮೆರಿಕದ ರಾಯಭಾರ ಕಚೇರಿಯಲ್ಲಿ ಇರುವ ಅಗತ್ಯ ನೌಕರರನ್ನು ಹೊರತುಪಡಿಸಿ, ಉಳಿದ ಸಿಬ್ಬಂದಿಗೆ ಶಾಂಘೈ ತೊರೆಯಲು ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.