ADVERTISEMENT

ಅಮೆರಿಕದಲ್ಲಿರುವುದು ‘ಗಂಡು ಮತ್ತು ಹೆಣ್ಣು’ ಎರಡೇ ಲಿಂಗ: ಟ್ರಂಪ್‌

ರಾಯಿಟರ್ಸ್
Published 21 ಜನವರಿ 2025, 2:46 IST
Last Updated 21 ಜನವರಿ 2025, 2:46 IST
ಡೊನಾಲ್ಡ್‌ ಟ್ರಂಪ್‌
ಡೊನಾಲ್ಡ್‌ ಟ್ರಂಪ್‌   

ವಾಷಿಂಗ್ಟನ್‌: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಲಿಂಗ ವೈವಿಧ್ಯತೆ ಕುರಿತು ಅಮೆರಿಕ ಸರ್ಕಾರದ ನೀತಿಗಳನ್ನು ಬದಲಾಯಿಸಲು ಮುಂದಾಗಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅಮೆರಿಕವನ್ನುದ್ದೇಶಿಸಿ ಮಾತನಾಡಿದ ಟ್ರಂಪ್‌, ‘ಇನ್ನು ಮುಂದೆ ಅಮೆರಿಕದಲ್ಲಿ ಗಂಡು ಮತ್ತು ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಾಗುತ್ತದೆ. ಇದೇ ನಮ್ಮ ಸರ್ಕಾರದ ಅಧಿಕೃತ ನೀತಿಯಾಗಲಿದೆ’ ಎಂದು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ಮಹಿಳಾ ಕ್ರೀಡಾಕೂಟದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಭಾಗವಹಿಸುವುದನ್ನು ರಿಪಬ್ಲಿಕನ್ ಪಕ್ಷದ ಅನೇಕರು ವಿರೋಧಿಸಿದ್ದರು.

ADVERTISEMENT

ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ್ದ ಟ್ರಂಪ್‌, ‘ಮಹಿಳಾ ಕ್ರೀಡಾಕೂಟಗಳಿಂದ ಎಲ್ಲ ಪುರುಷರನ್ನು ದೂರವಿಡಲು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದಿದ್ದರು.

‘ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ(ಡಿಇಐ) ಕಾರ್ಯಕ್ರಮದ ಮೇಲೆ ಟ್ರಂಪ್‌ ಸರ್ಕಾರ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದು, ಕಾರ್ಯಕಾರಿ ಆದೇಶ ಜಾರಿಯಾದರೆ ಡಿಇಐ ಕಾರ್ಯಕ್ರಮಗಳನ್ನು ಉತ್ತೇಜಿಸಲು ಸರ್ಕಾರದ ನಿಧಿ ಬಳಸಲು ಸಾಧ್ಯವಾಗುವುದಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.