ADVERTISEMENT

ಸ್ಪರ್ಧೆಯು ಸಂಘರ್ಷವಾಗದಿರಲಿ: ಮಾತುಕತೆ ವೇಳೆ ಅಮೆರಿಕ- ಚೀನಾ ಅಧ್ಯಕ್ಷರ ಇಂಗಿತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಸೆಪ್ಟೆಂಬರ್ 2021, 4:06 IST
Last Updated 10 ಸೆಪ್ಟೆಂಬರ್ 2021, 4:06 IST
   

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಏಳು ತಿಂಗಳ ಬಳಿಕ ಮೊದಲ ಬಾರಿಗೆ ಜೋ ಬೈಡನ್‌ ಅವರು ಚೀನಾ ಅಧ್ಯಕ್ಷ ಷಿ ಜಿಂಗ್‌ಪಿನ್‌ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

ಈ ಕುರಿತು ಶುಕ್ರವಾರ ಹೇಳಿಕೆ ನೀಡಿರುವ ಶ್ವೇತಭವನವು, 'ಎರಡು ರಾಷ್ಟ್ರಗಳ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳು ಹಾಗೂ ಕಾರ್ಯತಂತ್ರಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ' ಎಂದು ತಿಳಿಸಿದೆ.

ಜಗತ್ತಿನ ಪ್ರಮುಖ ಆರ್ಥಿಕತೆಗಳಾದ ಅಮೆರಿಕ ಮತ್ತು ಚೀನಾ ನಡುವಿನ ಸ್ಪರ್ಧೆಯು ಸಂಘರ್ಷಕ್ಕೆ ತಿರುಗದಂತೆ ನೋಡುಕೊಳ್ಳಲು ಎಚ್ಚರವಹಿಸಬೇಕೆಂದು ಉಭಯ ನಾಯಕರು ಬಯಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

ADVERTISEMENT

ಅಫ್ಗಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರ ವಹಿಸಿಕೊಂಡ ನಂತರ ಚೀನಾದ ನಿಲುವು ತಾಲಿಬಾನ್‌ ಆಡಳಿತದ ಪರವಾಗಿದೆ ಎಂಬುದು ಸ್ಪಷ್ಟವಾಗಿತ್ತು. ಆದರೆ, ತಾಲಿಬಾನ್‌ ಆಡಳಿತ ಮತ್ತು ಚೀನಾ ನಡುವೆ ಪ್ರಮುಖ ಸಮಸ್ಯೆ ಎದುರಾಗಿದೆ ಎಂದು ಅಮೆರಿಕ ಅಧ್ಯಕ್ಷ ಬೈಡನ್‌ ಬುಧವಾರ ಹೇಳಿದ್ದರು. v

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.