ನ್ಯೂಯಾರ್ಕ್/ವಾಷಿಂಗ್ಟನ್: ಎಚ್–1ಬಿ ವೀಸಾ ಶುಲ್ಕ ಹೆಚ್ಚಳವು ಪ್ರಸ್ತುತ ವೀಸಾ ಹೊಂದಿರುವವರಿಗೆ ಅನ್ವಯಿಸುವುದಿಲ್ಲ. ಇದು ಹೊಸ ಅರ್ಜಿದಾರರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್ ಆಡಳಿತ ಸ್ಪಷ್ಟಪಡಿಸಿದೆ.
ಸೆಪ್ಟೆಂಬರ್ 21ರೊಳಗೆ ಸಲ್ಲಿಸಲಾದ ಎಚ್–1ಬಿ ವೀಸಾ ಅರ್ಜಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪ್ರಸ್ತುತ ದೇಶದಿಂದ ಹೊರಗೆ ಇರುವ ವೀಸಾ ಹೊಂದಿರುವವರು ದೇಶಕ್ಕೆ ಮರುಪ್ರವೇಶಿಸಲು ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿವಿಧ ದೇಶಗಳ ಜನರನ್ನು ನೇಮಕ ಮಾಡಿಕೊಳ್ಳುವ ಅಮೆರಿಕದ ಕಂಪನಿಗಳು ತಮ್ಮ ಉದ್ಯೋಗಿಗಳಿಗಾಗಿ ಪಡೆಯುವ ಎಚ್–1ಬಿ ವೀಸಾ ಅರ್ಜಿಗೆ ಸಂಬಂಧಿಸಿದ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ (ಅಂದಾಜು ₹88 ಲಕ್ಷ) ಹೆಚ್ಚಿಸುವ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಸಹಿ ಹಾಕಿದ್ದಾರೆ.
ಎಚ್–1ಬಿ ವೀಸಾ ಶುಲ್ಕ ಹೆಚ್ಚಳದ ಬಗ್ಗೆ ಭಾರತೀಯರು ಸೇರಿದಂತೆ ವಿವಿಧ ದೇಶಗಳ ನಾಗರಿಕರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಟ್ರಂಪ್ ಆಡಳಿತದ ಸ್ಪಷ್ಟೀಕರಣದಿಂದ ತುಸು ನಿಟ್ಟುಸಿರು ಬಿಡುವಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.