ADVERTISEMENT

ಶ್ರೀಲಂಕಾದ ನೂತನ ಪ್ರಧಾನಿಯಾಗಿ ದಿನೇಶ್‌ ಗುಣವರ್ಧನೆ ಪ್ರಮಾಣ ವಚನ ಸ್ವೀಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜುಲೈ 2022, 6:29 IST
Last Updated 22 ಜುಲೈ 2022, 6:29 IST
ದಿನೇಶ್ ಗುಣವರ್ಧನೆ
ದಿನೇಶ್ ಗುಣವರ್ಧನೆ    

ಕೊಲಂಬೊ: ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹಿರಿಯ ರಾಜಕಾರಣಿ ದಿನೇಶ್ ಗುಣವರ್ಧನೆ ಅವರನ್ನು ನೇಮಕ ಮಾಡಲಾಗಿದೆ.

ಕೊಲಂಬೊದ ಫ್ಲವರ್ ರೋಡ್​ನಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಅವರ ಆಪ್ತರಾಗಿ ಗುರುತಿಸಿಕೊಂಡಿರುವ 73 ವರ್ಷದ ಗುಣವರ್ಧನೆ ಅವರಿಗೆ ವಿದೇಶಾಂಗ ಸಚಿವ ಮತ್ತು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವವಿದೆ.

ADVERTISEMENT

ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದಿದ್ದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರಾನಿಲ್‌ ವಿಕ್ರಮಸಿಂಘೆ ಅವರು ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದರು.

ಸಿಂಗಾಪುರಕ್ಕೆ ಪಲಾಯನ ಮಾಡಿರುವ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ರಾಜೀನಾಮೆಯಿಂದ ಶ್ರೀಲಂಕಾದ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.