ADVERTISEMENT

ಹಸ್ತಾಂತರ ಆದೇಶ| ಬ್ರಿಟನ್ ಸುಪ್ರೀಂಕೋರ್ಟ್‌ನಲ್ಲಿ ವಿಜಯ್ ಮಲ್ಯ ಅರ್ಜಿ ವಜಾ

ಪಿಟಿಐ
Published 14 ಮೇ 2020, 13:23 IST
Last Updated 14 ಮೇ 2020, 13:23 IST
ವಿಜಯ್ ಮಲ್ಯ  (ಸಂಗ್ರಹ ಚಿತ್ರ)
ವಿಜಯ್ ಮಲ್ಯ (ಸಂಗ್ರಹ ಚಿತ್ರ)   

ಲಂಡನ್: ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ದ ಉದ್ಯಮಿ ವಿಜಯ ಮಲ್ಯ ಬ್ರಿಟನ್‌ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿಗೆಗುರುವಾರ ಸೋಲಾಗಿದೆ.

ಕಳೆದ ತಿಂಗಳು ಹೈಕೋರ್ಟ್‌ನಲ್ಲಿ ಮಲ್ಯ ಸಲ್ಲಿಸಿದ್ದ ಅರ್ಜಿ ವಜಾ ಆದ ನಂತರ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಏಪ್ರಿಲ್‌ 20ರಂದು ಹೈಕೋರ್ಟ್‌ ಆದೇಶ ನೀಡಿತ್ತು. ಈ ಆದೇಶದ ವಿರುದ್ಧ ಅರ್ಜಿ ಸಲ್ಲಿಸಲು ಮಲ್ಯ ಅವರಿಗೆ 14 ದಿನಗಳ ಕಾಲಾವಕಾಶ ನೀಡಲಾಗಿತ್ತು.

ಮೌಖಿಕ ಹೇಳಿಕೆ ಆಲಿಸುವುದು, ಕೇಳಲಾದಪ್ರಶ್ನೆಗಳ ಬಗ್ಗೆ ಪ್ರಮಾಣಪತ್ರವನ್ನು ನೀಡುವುದು ಮತ್ತು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವುದು -ಈ ಮೂರು ಅಂಶಗಳಲ್ಲೂ ಮಲ್ಯ ಅವರ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ಬ್ರಿಟನ್ ಕ್ರೌನ್ ಪ್ರಾಸಿಕ್ಯೂಷನ್ ಸರ್ವಿಸ್ (ಸಿಪಿಎಸ್) ಹೇಳಿದೆ.

ADVERTISEMENT

ಮಲ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿ ಇದೇ ವಾರ ಭಾರತ ಸರ್ಕಾರ ತನ್ನ ಪ್ರತಿಕ್ರಿಯೆ ನೀಡಿತ್ತು. ಇದೀಗ ಮುಂದಿನ 28 ದಿನಗಳಲ್ಲಿ ಹಸ್ತಾಂತರದ ಪ್ರಕ್ರಿಯೆ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.