ADVERTISEMENT

ಗಡಿಪಾರು ಪ್ರಶ್ನಿಸಿ ಅರ್ಜಿ: ವಿಜಯ್‌ ಮಲ್ಯಗೆ ಬ್ರಿಟನ್ ಹೈಕೋರ್ಟಲ್ಲಿ ಸೋಲು

ಏಜೆನ್ಸೀಸ್
Published 20 ಏಪ್ರಿಲ್ 2020, 11:00 IST
Last Updated 20 ಏಪ್ರಿಲ್ 2020, 11:00 IST
ವಿಜಯ್ ಮಲ್ಯ
ವಿಜಯ್ ಮಲ್ಯ   

ಲಂಡನ್: ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಮೇಲ್ಮನವಿಗೆ ಬ್ರಿಟನ್ ಹೈಕೋರ್ಟ್‌ನಲ್ಲಿ ಸೋಮವಾರ ಸೋಲಾಗಿದೆ.

ನ್ಯಾಯಮೂರ್ತಿ ಸ್ಟೀಫನ್ ಒರ್ವಿನ್ ಮತ್ತು ಎಲಿಸಬೆತ್ ಲೇಯಿಂಗ್ ಅವರಿದ್ದ ನ್ಯಾಯಪೀಠ ಮಲ್ಯ ಅವರ ಮೇಲ್ಮನವಿ ಅರ್ಜಿಯನ್ನು ತಿರಸ್ಕರಿಸಿದೆ.

‘ಪ್ರಕರಣಕ್ಕೆ ಸಬಂಧಿಸಿ ಜಿಲ್ಲಾ ಹಿರಿಯ ನ್ಯಾಯಧೀಶರು ಕಂಡುಕೊಂಡಿರುವ ಪ್ರಾಥಮಿಕ ಅಂಶವು ಕೆಲವು ವಿಷಯಗಳಲ್ಲಿ ಭಾರತದ ಪ್ರತಿವಾದಿಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳು ಮಾಡಿರುವ ಆರೋಪಗಳಿಗಿಂತಲೂ ವಿಸ್ತಾರವಾಗಿವೆ ಎಂಬುದನ್ನು ನಾವು ಪರಿಗಣಿಸುತ್ತೇವೆ. ಈ ಅಂಶವು ಭಾರತ ಮಾಡಿರುವ ಏಳು ಆರೋಪಗಳಿಗೆ ಹೊಂದಿಕೆಯಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.

ADVERTISEMENT

ಭಾರತದ ಬ್ಯಾಂಕುಗಳಿಗೆ ಸುಮಾರು ₹ 9,000 ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು 2018ರ ಡಿಸೆಂಬರ್‌ನಲ್ಲಿ ಬ್ರಿಟನ್‌ನ ವೆಸ್ಟ್‌ಮಿನ್‌ಸ್ಟರ್‌ ನ್ಯಾಯಾಲಯ ಆದೇಶ ನೀಡಿತ್ತು. ಮಲ್ಯ ಗಡಿಪಾರಿಗೆ 2019ರ ಫೆಬ್ರುವರಿಯಲ್ಲಿ ಬ್ರಿಟನ್ ಸರ್ಕಾರ ಸಮ್ಮತಿ ನೀಡಿತ್ತು. ಬಳಿಕ ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.