ಮಾಸ್ಕೊ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಈ ವರ್ಷಾಂತ್ಯಕ್ಕೆ ಭಾರತ ಭೇಟಿ ಕೈಗೊಳ್ಳಲಿದ್ದಾರೆ ಎಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ರಷ್ಯಾದಲ್ಲಿ ಹೇಳಿದ್ದಾರೆ.
ಮಾಸ್ಕೊದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಅವರು ಈ ವಿಷಯ ತಿಳಿಸಿದ್ದಾರೆ.
ವ್ಲಾಡಿಮಿರ್ ಪುಟಿನ್ ಅವರು 2025ರ ಡಿಸೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ದಿನಾಂಕ ಇನ್ನಷ್ಟೇ ನಿಶ್ಚಯವಾಗಬೇಕಿದೆ ಎಂದು ತಿಳಿಸಿದ್ದಾರೆ.
ಅಮೆರಿಕ–ಭಾರತದ ನಡುವೆ ವ್ಯಾಪಾರ ಸಮರ ಶುರುವಾಗಿರುವ ಬೆನ್ನಲ್ಲೇ ಪುಟಿನ್ ಭಾರತ ಭೇಟಿ ಮಹತ್ವ ಪಡೆದುಕೊಂಡಿದೆ.
ಅಮೆರಿಕ ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ 25 ಸುಂಕ ವಿಧಿಸುತ್ತದೆ ಎಂದು ಟ್ರಂಪ್ ಕಳೆದ ಸೋಮವಾರ ಆದೇಶ ಮಾಡಿದ್ದರು. ಅಷ್ಟರಲ್ಲಿಯೇ ನಿನ್ನೆ ಹೆಚ್ಚುವರಿಯಾಗಿ ಶೇಕಡ 25ರಷ್ಟು ಸುಂಕ ಹೇರುವ (ಒಟ್ಟು ಶೇ50ರಷ್ಟು ಸುಂಕ) ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.
ಭಾರತ, ರಷ್ಯಾದಿಂದ ತೈಲವನ್ನು ಖರೀದಿಸುತ್ತಿರುವುದನ್ನು ನಿಲ್ಲಿಸುತ್ತಿಲ್ಲ ಎಂದು ಪ್ರತೀಕಾರವಾಗಿ ಅಮೆರಿಕ ಭಾರತದ ಮೇಲೆ ಭಾರಿ ಪ್ರಮಾಣದಲ್ಲಿ ಸುಂಕ ವಿಧಿಸುತ್ತಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.