ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ
ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಟರ್ಕಿಯಲ್ಲಿ ಗುರುವಾರ ನಡೆಯಲಿರುವ ಮಾತುಕತೆಯ ವೇಳೆ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಮಾತ್ರ ಭೇಟಿಯಾಗಲಿದ್ದಾರೆ. ರಷ್ಯಾದ ನಿಯೋಗದಲ್ಲಿರುವ ಇತರ ಸದಸ್ಯರನ್ನು ಭೇಟಿಯಾಗುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷರ ಸಲಹೆಗಾರರು ಮಂಗಳವಾರ ತಿಳಿಸಿದ್ದಾರೆ.
ಯುದ್ಧವನ್ನು ಕೊನೆಗೊಳಿಸುವ ಸಲುವಾಗಿ ಮಾತುಕತೆ ನಡೆಸಲು ಇಸ್ತಾನ್‌ಬುಲ್‌ನಲ್ಲಿ ಪುಟಿನ್ ಅವರನ್ನು ಭೇಟಿ ಮಾಡಲು ಸಿದ್ಧ ಎಂದು ಝೆಲೆನ್‌ಸ್ಕಿ ಹೇಳಿದ್ದಾರೆ. ಪ್ರಸ್ತಾವಿತ ಉಕ್ರೇನ್-ರಷ್ಯಾ ಶಾಂತಿ ಮಾತುಕತೆಯಲ್ಲಿ ಪಾಲ್ಗೊಳ್ಳಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೂ ಮುಂದಾಗಿದ್ದಾರೆ. ಮಾತುಕತೆಯಲ್ಲಿ ಪಾಲ್ಗೊಳ್ಳುವುದಕ್ಕೆ ಸಂಬಂಧಿಸಿದಂತೆ ರಷ್ಯಾ ಹೆಚ್ಚಿನ ವಿವರಗಳನ್ನು ಬಿಟ್ಟುಕೊಟ್ಟಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.