ADVERTISEMENT

ಕಾಬೂಲ್‌ ವಿಮಾನ ನಿಲ್ದಾಣ ವಶಕ್ಕೆ ತೆಗೆದುಕೊಳ್ಳಲು ಕಾಯುತ್ತಿದ್ದೇವೆ: ತಾಲಿಬಾನ್

ರಾಯಿಟರ್ಸ್
Published 29 ಆಗಸ್ಟ್ 2021, 4:39 IST
Last Updated 29 ಆಗಸ್ಟ್ 2021, 4:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಾಬೂಲ್: ಕಾಬೂಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಅಮೆರಿಕದ ಅಂತಿಮ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ತಾಲಿಬಾನ್ ಹೇಳಿದೆ.

ಅಮೆರಿಕ ನೇತೃತ್ವದ ಮಿತ್ರರಾಷ್ಟ್ರಗಳು ಸೇರಿದಂತೆ ಬಹುತೇಕ ದೇಶಗಳು ಅಫ್ಗಾನಿಸ್ತಾನದಿಂದ ತೆರವು ಕಾರ್ಯಾಚರಣೆಯನ್ನು ಅಂತಿಮಗೊಳಿಸುವ ಹಂತದಲ್ಲಿವೆ. ಬ್ರಿಟನ್ ಮತ್ತು ಇಟಲಿ ತೆರವು ಕಾರ್ಯಾಚರಣೆ ಪೂರ್ಣಗೊಳಿಸಿವೆ. ಅಮೆರಿಕವೂ ಬಾಕಿ ಉಳಿದಿರುವ ಯೋಧರನ್ನು ತ್ವರಿತವಾಗಿ ವಾಪಸ್ ಕರೆಸಿಕೊಳ್ಳುವುದಾಗಿ ಹೇಳಿದೆ. ಇದರ ಬೆನ್ನಲ್ಲೇ, ವಿಮಾನ ನಿಲ್ದಾಣದ ಹಸ್ತಾಂತರಕ್ಕೆ ಕಾಯುತ್ತಿರುವುದಾಗಿ ತಾಲಿಬಾನ್ ಹೇಳಿದೆ.

ನಮ್ಮ ತಾಂತ್ರಿಕ ತಜ್ಞರ ತಂಡ ವಿಮಾನ ನಿಲ್ದಾಣವನ್ನು ಮುನ್ನಡೆಸಲು ಸಿದ್ಧವಾಗಿದೆ ಎಂದು ತಾಲಿಬಾನ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನೂ ಸುಮಾರು ಸಾವಿರ ಮಂದಿ ವಿಮಾನ ನಿಲ್ದಾಣದ ಒಳಗೆ ಸ್ಥಳಾಂತರಕ್ಕಾಗಿ ಕಾಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕದ ಪಡೆಗಳು ಅಂತಿಮ ಹಂತದ ಸ್ಥಳಾಂತರ ಪ್ರಕ್ರಿಯೆ ಆರಂಭಿಸಿವೆ ಎಂದು ಅಮೆರಿಕದ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.