ADVERTISEMENT

West Asia Conflict | ಡೊನಾಲ್ಡ್‌ ಟ್ರಂಪ್‌ರನ್ನು ‘ಜೂಜುಕೋರ’ ಎಂದ ಇರಾನ್

ಏಜೆನ್ಸೀಸ್
Published 23 ಜೂನ್ 2025, 8:56 IST
Last Updated 23 ಜೂನ್ 2025, 8:56 IST
<div class="paragraphs"><p>ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌</p></div>

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

   

ಪಿಟಿಐ ಚಿತ್ರ

ದುಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ‘ಜೂಜುಕೋರ’ ಎಂದು ಕರೆದಿರುವ ಇರಾನ್, ‘ನೀವು ಆರಂಭಿಸಿರುವ ಯುದ್ಧವನ್ನು ನಾವು ಕೊನೆಗೊಳಿಸುತ್ತೇವೆ’ ಎಂದು ಆಕ್ರೋಶ ಹೊರಹಾಕಿದೆ.

ADVERTISEMENT

ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷದಲ್ಲಿ ಮಧ್ಯಪ್ರವೇಶಿಸುವ ಕುರಿತು ಶೀಘ್ರವೇ ನಿರ್ಧರಿಸಲಾಗುವುದು ಎಂದು ಹೇಳುತ್ತಿದ್ದ ಅಮೆರಿಕ, ಶನಿವಾರ ತಡರಾತ್ರಿ ಇರಾನ್‌ನ ಮೂರು ಪ್ರಮುಖ ಪರಮಾಣು ಘಟಕಗಳ ಮೇಲೆ ಭಾರಿ ಬಾಂಬ್‌ ದಾಳಿ ನಡೆಸಿತ್ತು.

‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್’ ಹೆಸರಿನ ಸೇನಾ ಕಾರ್ಯಾಚರಣೆ ನಡೆಸುವ ಮೂಲಕ, ಇರಾನ್‌ ವಿರುದ್ಧ ಇಸ್ರೇಲ್‌ ಸಾರಿರುವ ಯುದ್ಧವನ್ನು ಅಮೆರಿಕ ಅಧಿಕೃತವಾಗಿ ಪ್ರವೇಶಿಸಿದಂತಾಗಿದೆ.

‘ಇರಾನ್‌ನ ಫೋರ್ಡೊ, ನಟಾನ್ಜ್ ಹಾಗೂ ಎಸ್‌ಫಹಾನ್‌ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ನಡೆಸಿದ ದಾಳಿ ಯಶಸ್ವಿಯಾಗಿದೆ’ ಎಂದು ಟ್ರಂಪ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದರು.

‘ಪ್ರಮುಖ ಪರಮಾಣು ಘಟಕಗಳ ಮೇಲೆ ಭಾರಿ ಪ್ರಮಾಣದ ಬಾಂಬ್‌ ಹಾಕಲಾಗಿದ್ದು, ಎಲ್ಲ ಯುದ್ಧವಿಮಾನಗಳು ಸುರಕ್ಷಿತವಾಗಿ ಮರಳಿವೆ’ ಎಂದು ಅವರು ಹೇಳಿದ್ದರು.

ಅಮೆರಿಕದ ಈ ನಡೆ ಅಂತರರಾಷ್ಟ್ರೀಯ ನಿಯಮಗಳ ಉಲ್ಲಂಘನೆ ಎಂದು ಇರಾನ್‌ ಪ್ರತಿಕ್ರಿಯಿಸಿದೆ. ತನ್ನ ಜನರ ಹಾಗೂ ಸಾರ್ವಭೌಮತೆ ರಕ್ಷಣೆಗಾಗಿ ಎಲ್ಲ ಆಯ್ಕೆಗಳನ್ನು ಇರಾನ್‌ ಮುಕ್ತವಾಗಿರಿಸಿ ಕೊಂಡಿದ್ದು, ತಕ್ಕ ಉತ್ತರ ನೀಡುವುದಾಗಿ ವಿದೇಶಾಂಗ ಸಚಿವ ಅಬ್ಬಾಸ್‌ ಅರಾಗ್ಚಿ ಗುಡುಗಿದ್ದಾರೆ.

ಇನ್ನೊಂದೆಡೆ, ಇಂತಹ ದಿಟ್ಟ ನಿರ್ಧಾರ ಕೈಗೊಂಡಿದ್ದಕ್ಕಾಗಿ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಭಿನಂದಿಸುವುದಾಗಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ, ತನ್ನ ವಾಯುಪ್ರದೇಶವನ್ನು ಮುಚ್ಚಿರುವುದಾಗಿ ಇಸ್ರೇಲ್‌ ಘೋಷಿಸಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇರಾನ್‌ ಮೇಲಿನ ದಾಳಿಯನ್ನು ಇಸ್ರೇಲ್‌ ಸೋಮವಾರವೂ ತೀವ್ರಗೊಳಿಸಿದೆ. ಶ್ಚಿಮ, ಪೂರ್ವ ಮತ್ತು ಮಧ್ಯ ಇರಾನ್‌ನ ಆರು ವಿಮಾನ ನಿಲ್ದಾಣಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ. ಇದಕ್ಕೆ ಪ್ರತಿಯಾಗಿ, ಇಸ್ರೇಲ್‌ನ ಪ್ರಮುಖ ಸ್ಥಳಗಳನ್ನು ಗುರಿಯಾಗಿಸಿ ಇರಾನ್‌ ಕೂಡ ದಾಳಿ ನಡೆಸಿದ್ದು, ಸಂಘರ್ಷ ತೀವ್ರಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.