ADVERTISEMENT

ಕ್ಯಾಲಿಫೋರ್ನಿಯಾದಲ್ಲಿ ಗಾಂಧಿ ಪ್ರತಿಮೆಗೆ ಹಾನಿ : ಶ್ವೇತಭವನ ಖಂಡನೆ

ಪಿಟಿಐ
Published 2 ಫೆಬ್ರುವರಿ 2021, 8:51 IST
Last Updated 2 ಫೆಬ್ರುವರಿ 2021, 8:51 IST
ಜೆನ್‌ ಸಾಕಿ
ಜೆನ್‌ ಸಾಕಿ   

ವಾಷಿಂಗ್ಟನ್‌: ಕ್ಯಾಲಿಫೋರ್ನಿಯಾದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಹಾನಿಗೊಳಿಸಿರುವ ಕೃತ್ಯವನ್ನು ಶ್ವೇತ ಭವನ ಖಂಡಿಸಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್‌ ಸಾಕಿ ಅವರು, ‘ಅಪಚರಿತ ವ್ಯಕ್ತಿಗಳು ಗಾಂಧೀಜಿ ಅವರ ಪ್ರತಿಮೆಯನ್ನು ಹಾನಿಗೊಳಿಸಿದ್ದಾರೆ. ಈ ಬಗ್ಗೆ ನಮಗೂ ಕಾಳಜಿ ಇದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ’ ಎಂದಿದ್ದಾರೆ.

ಇತ್ತೀಚೆಗೆ ಉತ್ತರ ಕ್ಯಾಲಿಫೋರ್ನಿಯಾದ ಡೇವಿಸ್ ನಗರದಲ್ಲಿ ಸೆಂಟ್ರಲ್ ಪಾರ್ಕ್‌ನಲ್ಲಿರುವ ಗಾಂಧೀಜಿ ಅವರ 6 ಅಡಿ ಎತ್ತರದ, 294 ಕೆ.ಜಿ ತೂಕದ ಕಂಚಿನ ಪ್ರತಿಮೆಯನ್ನು ಹಾನಿಗೊಳಿಸಲಾಗಿತ್ತು.

ADVERTISEMENT

ಇದಕ್ಕೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.