

ಜಿನಿವಾ: ಕೋವಿಡ್–19ಗೆ ಮೊಡೆರ್ನಾ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅನುಮೋದನೆ ನೀಡಿದೆ.
ವಿಶ್ವ ಆರೋಗ್ಯ ಸಂಸ್ಥೆ ತುರ್ತು ಬಳಕೆಗೆ ಅನುಮೋದನೆ ನೀಡಿರುವ ಅಸ್ಟ್ರಾಜೆನೆಕಾ, ಫೈಜರ್-ಬಯೋಟೆಕ್ ಮತ್ತು ಜಾನ್ಸನ್ ಅಂಡ್ ಜಾನ್ಸನ್ ಲಸಿಕೆಗಳ ಪಟ್ಟಿಗೆ ಅಮೆರಿಕದ ಕಂಪನಿ ತಯಾರಿಸುವ ಎಂಆರ್‌ಎನ್ಎ ಕೋವಿಡ್ ಲಸಿಕೆಯು ಸೇರಿದೆ.
ಚೀನಾದ ಸಿನೋಫಾರ್ಮ್ ಮತ್ತು ಸಿನೋವಾಕ್ ಲಸಿಕೆಗಳಿಗೆ ಮುಂದಿನ ದಿನಗಳಲ್ಲಿ ಇದೇ ರೀತಿಯ ಅನುಮೋದನೆ ನಿರೀಕ್ಷಿಸಬಹುದಾಗಿದೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.