ADVERTISEMENT

ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡ್ರೋಸ್‌ ಅಡಾನೊಮ್ ಗೆಬ್ರೆಯೆಸಸ್‌ಗೆ‌ ಕ್ವಾರಂಟೈನ್

ಏಜೆನ್ಸೀಸ್
Published 2 ನವೆಂಬರ್ 2020, 3:54 IST
Last Updated 2 ನವೆಂಬರ್ 2020, 3:54 IST
ಟೆಡ್ರೋಸ್‌ ಅಡಾನೊಮ್ ಗೆಬ್ರೆಯೆಸಸ್‌ (ಎಎಫ್‌ಪಿ ಚಿತ್ರ)
ಟೆಡ್ರೋಸ್‌ ಅಡಾನೊಮ್ ಗೆಬ್ರೆಯೆಸಸ್‌ (ಎಎಫ್‌ಪಿ ಚಿತ್ರ)   

ವಿಶ್ವಸಂಸ್ಥೆ: ಕೋವಿಡ್ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ (ಡಬ್ಲ್ಯುಎಚ್‌ಒ) ಟೆಡ್ರೋಸ್‌ ಅಡಾನೊಮ್ ಗೆಬ್ರೆಯೆಸಸ್‌ ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ. ತಮಗೆ ರೋಗ ಲಕ್ಷಣಗಳಿಲ್ಲ ಎಂದು ಅವರು ಹೇಳಿದ್ದಾರೆ.

‘ನಾನು ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರ ಸಂಪರ್ಕಕ್ಕೆ ಬಂದಿರುವುದು ಗೊತ್ತಾಗಿದೆ. ನನಗೆ ರೋಗ ಲಕ್ಷಣಗಳು ಕಂಡುಬಂದಿಲ್ಲ, ಆರೋಗ್ಯವಾಗಿದ್ದೇನೆ. ಆದರೂ ಡಬ್ಲ್ಯುಎಚ್‌ಒ ನಿಯಮಾನುಸಾರ ಮುಂದಿನ ದಿನಗಳಲ್ಲಿ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿ ಮನೆಯಿಂದಲೇ ಕಾರ್ಯನಿರ್ವಹಿಸಲಿದ್ದೇನೆ’ ಎಂದು ಗೆಬ್ರೆಯೆಸಸ್‌ ಟ್ವೀಟ್ ಮಾಡಿದ್ದಾರೆ.

ಆರೋಗ್ಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಾವೆಲ್ಲರೂ ನಡೆದುಕೊಳ್ಳಬೇಕಾದ್ದು ಅತೀ ಅಗತ್ಯ. ಸೋಂಕಿನ ಸರಪಳಿ ತುಂಡರಿಸುವುದಕ್ಕೆ ಅದು ಅನಿವಾರ್ಯವೂ ಆಗಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.