ADVERTISEMENT

ಕೋವಿಡ್‌: ಅಸ್ಟ್ರಾಜೆನೆಕಾ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 2:52 IST
Last Updated 16 ಫೆಬ್ರುವರಿ 2021, 2:52 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಿಶ್ವಸಂಸ್ಥೆ: ಕೋವಿಡ್–19 ನಿಯಂತ್ರಣದ ಸಲುವಾಗಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ.

ಔಷಧ ತಯಾರಿಕ ಕಂಪನಿಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಈ ಲಸಿಕೆಯನ್ನು ತಯಾರಿಸಿದೆ. ಭಾರತದಲ್ಲಿ ಸೆರಂ, ಕೊರಿಯಾದಲ್ಲಿ ಎಸ್‌ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ.

ನಾವು ಲಸಿಕೆ ತಯಾರಿಕೆ ಸಂಖ್ಯೆಯನ್ನು ಹೆಚ್ಚಿಸಬೇಕಿದ್ದು ಲಸಿಕೆಗಳನ್ನುವೇಗವಾಗಿ ವಿತರಣೆ ಮಾಡಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೊಸ್‌ ಅಧಾನೊಮ್‌ ಗೆಬ್ರೆಯೆಸುಸ್‌ ಹೇಳಿದ್ದಾರೆ.

ADVERTISEMENT

ಇದನ್ನು ಇತರೆ ಲಸಿಕೆಗಳಿಗೆ ಹೋಲಿಸಿದರೆ ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು ನಿರ್ವಹಣೆಯು ಸರಳವಾಗಿದೆ. 8 ರಿಂದ 12 ವಾರಗಳಲ್ಲಿ 2 ಡೋಸ್‌ ಲಸಿಕೆ ನೀಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.